ಆ್ಯಪ್ನಗರ

ಶಿರಾ ಬೈಎಲೆಕ್ಷನ್: ಜೆ.ಸಿ ಮಾಧುಸ್ವಾಮಿ ಮೌನಕ್ಕೆ ಕಾರಣವೇನು?

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಬೇಕಾಗಿದ್ದ ಸಚಿವ ಜೆ.ಸಿ ಮಾಧುಸ್ವಾಮಿ ಮೌನವಾಗಿದ್ದಾರೆ. ಯಾವುದೇ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ. ಇದಕ್ಕೆ ಕಾರಣ ಏನು?

Vijaya Karnataka Web 30 Oct 2020, 1:41 pm
ತುಮಕೂರು: ಶಿರಾ ವಿಧಾನಸಭಾ ಉಪಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರವಾಗಿ ಶುಕ್ರವಾರ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಇಡೀ ಚುನಾವಣಾ ಪ್ರಕ್ರಿಯೆಯಲ್ಲಿ ಸಚಿವ ಜೆಸಿ ಮಾಧುಸ್ವಾಮಿ ಮೌನ ಕುತೂಹಲಕ್ಕೆ ಕಾರಣವಾಗಿದೆ.
Vijaya Karnataka Web maduswami


ತುಮಕೂರು ಜಿಲ್ಲೆಯವರೇ ಆದ ಸಚಿವ ಜೆ.ಸಿ ಮಾಧುಸ್ವಾಮಿ ಚುನಾವಣೆ ಪ್ರಚಾರದಲ್ಲಿ ಎಲ್ಲೂ ಕಾಣಿಸಿಕೊಂಡಿಲ್ಲ. ಶಿರಾ ಪಕ್ಕದಲ್ಲಿರುವ ಚಿಕ್ಕನಾಯಕನಹಳ್ಳಿ ಮಾಧುಸ್ವಾಮಿ ಕ್ಷೇತ್ರವಾಗಿದೆ. ತನ್ನ ಪಕ್ಕದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರವಾಗಿ ಮಾಧುಸ್ವಾಮಿ ಪ್ರಚಾರ ನಡೆಸಿಲ್ಲ. ಇದಕ್ಕೆ ಕಾರಣ ಏನು ಎಂಬುವುದು ಕೂಡಾ ಸ್ಪಷ್ಟಗೊಂಡಿಲ್ಲ.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಚುನಾವಣೆಯೂ ಬಂದಿಲ್ಲ! ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಸಿದ್ದು ಉತ್ತರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆ.ಸಿ ಮಾಧುಸ್ವಾಮಿ ಸಕ್ರಿಯರಾಗಿದ್ದರು. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವಿರುದ್ಧ ಚುನಾವಣಾ ರಣತಂತ್ರ ರೂಪಿಸುವಲ್ಲಿ ಮಾಧುಸ್ವಾಮಿ ಪಾತ್ರವೂ ಮಹತ್ವದ್ದಾಗಿತ್ತು. ಆದರೆ ಈ ಬಾರಿಯ ಉಪಚುನಾವಣೆಯಲ್ಲಿ ಮಾಧುಸ್ವಾಮಿ ಸೈಲೆಂಟ್ ಆಗಿದ್ದಾರೆ. ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದೆ ದೂರ ಉಳಿದುಕೊಂಡಿದ್ದಾರೆ.

ಸಚಿವ ಮಾಧುಸ್ವಾಮಿಯ ಈ ನಡೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಬಿಜೆಪಿಯಲ್ಲಿ ಆಂತರಿಕವಾಗಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಯ ಪ್ರತಿಫಲವೇ ಎಂಬ ಮಾತು ಕೇಳಿಬರುತ್ತಿದೆ. ಸಚಿವ ಜೆ.ಸಿ ಮಾಧುಸ್ವಾಮಿಗೆ ಕೋವಿಡ್ 19 ಇದ್ದರೂ ಅವರು ಅದರಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಇದನ್ನು ಹೊರತು ಪಡಿಸಿ ಮಾಧುಸ್ವಾಮಿ ಶಿರಾದಲ್ಲಿ ಗೈರಾಗಲು ಏನು ಕಾರಣ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ