ಆ್ಯಪ್ನಗರ

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ

ತಾವರೆಕೆರೆ ಗ್ರಾಮದಲ್ಲಿ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಜ್ಯೂಸ್ ಕೊಡಿಸುವುದಾಗಿ ಪುಸಲಾಯಿಸಿ ಅತ್ಯಾಚಾರ ಮಾಡಲಾಗಿದೆ.

Vijaya Karnataka Web 19 May 2018, 9:45 am
Vijaya Karnataka Web rape minor
ತುಮಕೂರು: ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಜ್ಯೂಸ್ ಕೊಡಿಸುವುದಾಗಿ ಪುಸಲಾಯಿಸಿ ಅತ್ಯಾಚಾರ ಮಾಡಲಾಗಿದೆ.

ಅತ್ಯಾಚಾರ ಆರೋಪಿ ಪ್ರಭು ಎಂದು ತಿಳಿದು ಬಂದಿದ್ದು, ಶಿರಾ ಬಸ್ ನಿಲ್ದಾಣದಲ್ಲಿ ಪಾನಿ ಪುರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಬಾಲಕಿಗೆ ಜ್ವರ ಬಂದ ಕಾರಣ ಆಕೆಯ ತಂದೆ ತಾಯಿಗಳು ಮನೆಗೆ ಕರೆದುಕೊಂಡು ಹೋದಾಗ ವಿಷಯ ತಿಳಿದಿದೆ. ಆರೋಪಿಯನ್ನು ಗ್ರಾಮಸ್ಥರು ಥಳಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ