ಆ್ಯಪ್ನಗರ

ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಿಎಂಗೆ ಮನವಿ

ಉಪಮುಖ್ಯಮಂತ್ರಿ ಜತೆಗೆ ಗೃಹ ಖಾತೆ ನಿರ್ವಹಣೆ ಮಾಡುತ್ತಿರುವ ಡಾ.ಜಿ.ಪರಮೇಶ್ವರ ಅವರಿಗೆ ಹೆಚ್ಚಿನ ಒತ್ತಡ ಇರುತ್ತದೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಜಿಲ್ಲಾ ಉಸ್ತವಾರಿ ಸಚಿವ ಸ್ಥಾನ ತಮಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಒಂದು ವೇಳೆ ನೀಡದಿದ್ದರೂ ತಮಗೇನೂ ಬೇಸರವಿಲ್ಲ ಎಂದು ಸಣ್ಣ ಕೈಗಾರಿಕೆ ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಹೇಳಿದರು.

Vijaya Karnataka 12 Jun 2018, 5:00 am
ಸಿರಾ : ಉಪಮುಖ್ಯಮಂತ್ರಿ ಜತೆಗೆ ಗೃಹ ಖಾತೆ ನಿರ್ವಹಣೆ ಮಾಡುತ್ತಿರುವ ಡಾ.ಜಿ.ಪರಮೇಶ್ವರ ಅವರಿಗೆ ಹೆಚ್ಚಿನ ಒತ್ತಡ ಇರುತ್ತದೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಜಿಲ್ಲಾ ಉಸ್ತವಾರಿ ಸಚಿವ ಸ್ಥಾನ ತಮಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಒಂದು ವೇಳೆ ನೀಡದಿದ್ದರೂ ತಮಗೇನೂ ಬೇಸರವಿಲ್ಲ ಎಂದು ಸಣ್ಣ ಕೈಗಾರಿಕೆ ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಹೇಳಿದರು.
Vijaya Karnataka Web request the cm to take charge of the district
ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಿಎಂಗೆ ಮನವಿ


ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಭೇಟಿ ಮಾಡಿ ಆರ್ಶೀವಚನ ಪಡೆದು ಮಾತನಾಡಿದ ಅವರು, ಹೇಮಾವತಿ ಡ್ಯಾಂ ಇರುವಂತಹ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜಿಲ್ಲೆಯ ಪಾಲಿಗೆ ವರದಾನವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತಡೆಯಲಿದೆ ಎಂದರು.

ರೈತರ ಹಿತಕಾಯಲು ಸರಕಾರ ಬದ್ಧವಾಗಿದ್ದು, ಹೇಮಾವತಿ ನೀರನ್ನು ಈ ಭಾರಿ ಸೂಕ್ತ ನಿರ್ವಹಣೆ ಮೂಲಕ ಹಂಚಲು ಕ್ರಮ ಕೈಗೊಳ್ಳಲಾಗುವುದು. ಸಿರಾ ಶಾಸಕ ಬಿ.ಸತ್ಯನಾರಾಯಣರವರು ನಮ್ಮ ಹಿರಿಯರು. ಇವರ ಮಾರ್ಗದರ್ಶನ, ಸಲಹೆ ಪಡೆದು ಆಡಳಿತ ನಡೆಸಲಾಗುವುದು. ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸರಕಾರ ಸಣ್ಣ ಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ ಹೆಚ್ಚು ಒತ್ತು ನೀಡಲಿದ್ದು, ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು.

ನೂತನ ಸಚಿವರಿಗೆ ಆರ್ಶೀವಚನ ನೀಡಿ ಮಾತನಾಡಿದ ನಂಜಾವಧೂತಶ್ರೀ, ರೈತ ಮತ್ತು ಜನಸಾಮಾನ್ಯರ ಕಷ್ಟಗಳಿಗೆ ತಕ್ಷ ಣ ಸ್ಪಂದಿಸುವ ಮೂಲಕ, ಜನಪರ ಆಡಳಿತ ನೀಡಿ ಸರಕಾರ ಆರಂಭದಲ್ಲಿಯೇ ಜನರ ವಿಶ್ವಾಸಕ್ಕೆ ಪಾತ್ರವಾಗಬೇಕು. ರಾಜ್ಯದಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸುವ ಮೂಲಕ ನೀರಿನ ಬವಣೆ ಬಾರದಂತೆ ನೋಡಿಕೊಳ್ಳಬೇಕು. ಮತದಾರನಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಕಾರ್ಯಪ್ರವೃತ್ತರಾದಾಗ ಜನರ ವಿಶ್ವಾಸ ಮತ್ತೆ ಸಿಗಲಿದೆ ಎಂದು ಸಚಿವರಿಗೆ ಸಲಹೆ ನೀಡಿದರು.

ಜೆಡಿಎಸ್‌ ಮುಖಂಡರಾದ ಶಶಿಧರ್‌, ವಿಜಯಕುಮಾರ್‌, ಹನುಮಂತೇಗೌಡ, ಚಿನ್ನೇಗೌಡ, ಕಾಕಿಮಲಯ್ಯ, ರಂಗನಾಥಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ