ಆ್ಯಪ್ನಗರ

ಶಿರಾ ಉಪಚುನಾವಣೆ: ಕರ್ತವ್ಯಕ್ಕೆ ಹಾಜರಾಗದ ವಾಹನಗಳು ವಶ

ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕೆಲಸಕ್ಕೆ ಹಾಜರಾಗದ ಎರಡು ಸರಕಾರಿ (ಇಲಾಖೆ) ವಾಹನಗಳನ್ನು ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಆದೇಶ ನೀಡಿದ್ದರೂ ಚಾಲಕರು ನಿರ್ಲಕ್ಷ್ಯ ತೋರಿದ್ದರು.

Vijaya Karnataka Web 22 Oct 2020, 10:17 pm
ತುಮಕೂರು: ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕೆಲಸಕ್ಕೆ ಹಾಜರಾಗದ ಎರಡು ಸರಕಾರಿ (ಇಲಾಖೆ) ವಾಹನಗಳನ್ನು ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
Vijaya Karnataka Web vehicle tumakuru


ಜಿಲ್ಲಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದ್ದರೂ ಚಾಲಕರು ನಿರ್ಲಕ್ಷ್ಯ ತೋರಿದ್ದಾರೆ. ಈ ಸಂಬಂಧ ಕರ್ತವ್ಯಕ್ಕೆ ಹಾಜರಾಗದ ಒಂದು ಬುಲೆರೋ ಮತ್ತು ಟಾಟಾ ಸುಮ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ವಾಹನ ಚಾಲಕರು ಜಿಲ್ಲಾ ಚುನಾವಣಾಧಿಕಾರಿಗಳ ಆದೇಶವನ್ನು ನಿರ್ಲಕ್ಷಿಸಿದ್ದು, ಸರಕಾರಿ ಅಧಿಕಾರಿಗಳು ಖಾಸಗಿ ವಾಹನವನ್ನು ಬಳಸಿ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಈ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.

ಶಿರಾ ಬೈಎಲೆಕ್ಷನ್ ಸಮರ : ರಂಗೇರಿದ ಅಖಾಡ, ಕೈ ಕಮಲ ದಳ ನಾಯಕರ ಬಿರುಸಿನ ಪ್ರಚಾರ

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಈ ಮೂರು ಪಕ್ಷಗಳ ಅಬ್ಬರದ ಪ್ರಚಾರದಿಂದ ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ. ಆದರೆ ಅಂತಿಮವಾಗಿ ಯಾರಿಗೆ ಈ ಕ್ಷೇತ್ರ ಒಲಿಯುತ್ತೆ ಎಂಬುದು ಕುತೂಹಲ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ