ಆ್ಯಪ್ನಗರ

ಕಾರು ಪಲ್ಟಿ: ಇಬ್ಬರು ಸಾವು

ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದ 8 ಮಂದಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಾವರೆಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬುಧವಾರ ನಡೆದಿದೆ.

Vijaya Karnataka 16 May 2019, 5:00 am
ಸಿರಾ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದ 8 ಮಂದಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಾವರೆಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬುಧವಾರ ನಡೆದಿದೆ.
Vijaya Karnataka Web sira car crashed to road divider and overturned two dead
ಕಾರು ಪಲ್ಟಿ: ಇಬ್ಬರು ಸಾವು


ಜಯತಿ(6) ಮತ್ತು ಸುಧಮ್ಮ (55) ಮೃತಪಟ್ಟವರು. ಶಿವಣ್ಣ, ಮೇಘನ, ಬಾಲಮ್ಮ, ಮಂಜಮ್ಮ, ಹಿಮ, ಸುಬಧ ಗಾಯಗೊಂಡವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ತುಮಕೂರಿನಲ್ಲಿ ಸಂಬಂಧಿಕರ ಮದುವೆಗೆಂದು ಹೋಗಿ ವಾಪಸ್‌ ತಮ್ಮ ಊರಾದ ಹಿರಿಯೂರು ತಾಲೂಕಿನ ಎ.ವಿ.ಕೊಟ್ಟಿಗೆ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಹಿರಿಯೂರು, ಸಿರಾ ಮತ್ತು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ತಾವರೆಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ