ಆ್ಯಪ್ನಗರ

ನಾನು ಯಾರಿಗೂ ಸಚಿವ ಸ್ಥಾನ ತಪ್ಪಿಸಿಲ್ಲ: ಪರಮೇಶ್ವರ್

ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ತಪ್ಪಿಸಿರುವುದಾಗಿ ನನ್ನ ಹಾಗೂ ಕೃಷ್ಣ ಭೈರೇಗೌಡರವರ ಬಗ್ಗೆ ಆರೋಪಗಳಿವೆ. ಇದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ ಡಿಸಿಎಂ ಪರಮೇಶ್ವರ್.

Vijaya Karnataka Web 24 Dec 2018, 12:33 pm
ತುಮಕೂರು: ಪಕ್ಷದ ಹಿರಿಯ ಹಾಗೂ ಕಿರಿಯ ನಾಯಕರುಗಳಿರುವುದರಿಂದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ವಲ್ಪ ಮನಸ್ತಾಪ ಇದ್ದೇ ಇರುತ್ತದೆ. ಆದರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇದೆ ಎಂದು ತಿಳಿದುಕೊಳ್ಳಬಾರದು ಎಂದು ಡಿ.ಸಿ.ಎಂ ಡಾ.ಜಿ ಪರಮೇಶ್ವರ್ ಇಂದು ಸಿದ್ಧಗಂಗಾಮಠದಲ್ಲಿ ಹೇಳಿದರು.
Vijaya Karnataka Web Parameshwar 1


ಸೋಮವಾರ ಬೆಳಗ್ಗೆ ಶ್ರೀ ಸಿದ್ದಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ತಪ್ಪಿಸಿರುವುದಾಗಿ ನನ್ನ ಹಾಗೂ ಕೃಷ್ಣ ಭೈರೇಗೌಡರವರ ಬಗ್ಗೆ ಆರೋಪಗಳಿವೆ. ಇದು ಸತ್ಯಕ್ಕೆ ದೂರವಾದ ಮಾತು. ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನದಿಂದ ಪಕ್ಷ ಅಧಿಕಾರ ನಡೆಸುತ್ತಿದೆ. ಸಚಿವರ ಸ್ಥಾನಗಳನ್ನು ಹೈಕಮಾಂಡ್ ತೀರ್ಮಾನ‌ ಮಾಡಲಿದೆ ಎಂದರು.

ಶ್ರೀಗಳು ಚಿಕಿತ್ಸೆ ಪಡೆದ ಬಂದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ತೆರಳಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ. ಈಗ ಯಾವುದೇ ತೊಂದರೆ ಇಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಎಸ್.ಪಿ ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ