ಆ್ಯಪ್ನಗರ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿಯನ್ನು ಅಪರಾಧಿಯಾಗಿಸುವುದು ಸರಿಯಲ್ಲ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಇತ್ತೀಚಿಗೆ ಸಲ್ಲಿಸಿದ ಮಧ್ಯಂತರ ಆರೋಪ ಪಟ್ಟಿಯಲ್ಲಿ ಸನಾತನ ಸಂಸ್ಥೆಯ ಹೆಸರು ಇದೆ ಎಂದು ಮಾಧ್ಯಮಗಳಲ್ಲಿ ಕೇಳಿಬರುತ್ತಿದೆ

Vijaya Karnataka 26 Nov 2018, 4:49 pm
ಉಡುಪಿ :ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಇತ್ತೀಚಿಗೆ ಸಲ್ಲಿಸಿದ ಮಧ್ಯಂತರ ಆರೋಪ ಪಟ್ಟಿಯಲ್ಲಿ ಸನಾತನ ಸಂಸ್ಥೆಯ ಹೆಸರು ಇದೆ ಎಂದು ಮಾಧ್ಯಮಗಳಲ್ಲಿ ಕೇಳಿಬರುತ್ತಿದೆ. ಆರೋಪ ಪಟ್ಟಿಯಲ್ಲಿ ಹೆಸರು ಉಲ್ಲೇಖಿಸಿದ ಮಾತ್ರಕ್ಕೆ ದೋಷಿ ಎಂದು ಸಾಬೀತಾಗುವುದಿಲ್ಲ. ಹೀಗಾಗಿ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯನ್ನು ಅಪರಾಧಿ ಎಂದು ನಿರ್ಧರಿಸುವುದು ಸರಿಯಲ್ಲ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ ರಾಜಹಂಸ ತಿಳಿಸಿದ್ದಾರೆ.
Vijaya Karnataka Web
ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿಯನ್ನು ಅಪರಾಧಿಯಾಗಿಸುವುದು ಸರಿಯಲ್ಲ


ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವವರಲ್ಲಿ ಯಾರೂ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ಪದಾಧಿಕಾರಿಗಳಲ್ಲ. ಆದರೂ ವಿನಾ ಕಾರಣ ಸಂಸ್ಥೆಯನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿಚಾರವಾದಿಗಳ ಹತ್ಯೆ ಪ್ರಕರಣದಲ್ಲಿ ನಾವು ಈ ವರೆಗೆ ಎಲ್ಲ ತನಿಖಾ ದಳಗಳಿಗೆ ಸಹಕಾರ ನೀಡಿದ್ದೇವೆ. ಇದುವರೆಗೆ ಈ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಕೈವಾಡವಿದೆ ಎಂಬುದಕ್ಕೆ ಯಾವುದೇ ಪುರಾವೆ ದೊರಕಿಲ್ಲ. ಆದರೂ ಕೆಲವು ತಥಾಕಥಿತ ಪ್ರಗತಿಪರರು ನಿಜವಾದ ಕೊಲೆಗಾರ ಸಿಗಲಿ ಅಥವಾ ಸಿಗದಿರಲಿ, ಸನಾತನ ಸಂಸ್ಥೆಯೇ ಹತ್ಯೆ ಮಾಡಿತು ಎಂದು ಹೇಳುತ್ತಾ ಸಂಸ್ಥೆಯ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ 10 ವರ್ಷಗಳ ಹಿಂದೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯವನ್ನು ಬಿಟ್ಟು ಹೋಗಿದ್ದ ಕಾರ್ಯಕರ್ತರನ್ನು ಬಂಧಿಸಿ ಮತ್ತು ಅವರು ಸಮಿತಿಯಲ್ಲಿ ಸಕ್ರಿಯ ಕಾರ್ಯಕರ್ತನೆಂದು ಬಿಂಬಿಸಿ ಹಿಂದೂ ಜನಜಾಗೃತಿ ಸಮಿತಿಯನ್ನು ದೋಷಿ ಎಂದು ನಿರ್ಧರಿಸಲಾಗುತ್ತಿದೆ. ಇದೊಂದು ಸಂಚಲ್ಲವೇ? ಹೀಗಾಗಿ ಆರೋಪ ಪಟ್ಟಿ ಕೈ ಸೇರಿದ ನಂತರವೇ ಈ ಬಗ್ಗೆ ಸವಿಸ್ತಾರವಾಗಿ ತಮ್ಮ ನಿಲುವನ್ನು ಮಂಡಿಸುವುದಾಗಿ ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ