ಆ್ಯಪ್ನಗರ

ಜ.25ರಿಂದ 27: ಬಾರ್ಕೂರಿನಲ್ಲಿ ಅಲುಪೋತ್ಸವ

ತುಳುನಾಡನ್ನು ಆಳಿದ 'ಅಲುಪ'ರ ನೆನಪಿನಲ್ಲಿ ರಾಜ್ಯ ಸರಕಾರದ ವತಿಯಿಂದ ಬಾರ್ಕೂರಿನಲ್ಲಿ ಜ.25ರಿಂದ 27ರ ತನಕ 'ಅಲುಪೋತ್ಸವ' ನಡೆಯಲಿದೆ. ಈ ಉತ್ಸವಕ್ಕೆ ಸರಕಾರ 1.25 ಕೋ.ರೂ.ಅನುದಾನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ತಿಳಿಸಿದ್ದಾರೆ.

Vijaya Karnataka Web 28 Dec 2018, 5:00 am
ಉಡುಪಿ : ತುಳುನಾಡನ್ನು ಆಳಿದ 'ಅಲುಪ'ರ ನೆನಪಿನಲ್ಲಿ ರಾಜ್ಯ ಸರಕಾರದ ವತಿಯಿಂದ ಬಾರ್ಕೂರಿನಲ್ಲಿ ಜ.25ರಿಂದ 27ರ ತನಕ 'ಅಲುಪೋತ್ಸವ' ನಡೆಯಲಿದೆ. ಈ ಉತ್ಸವಕ್ಕೆ ಸರಕಾರ 1.25 ಕೋ.ರೂ.ಅನುದಾನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ತಿಳಿಸಿದ್ದಾರೆ.
Vijaya Karnataka Web news/udupi/alupothsava
ಜ.25ರಿಂದ 27: ಬಾರ್ಕೂರಿನಲ್ಲಿ ಅಲುಪೋತ್ಸವ


ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಅಲುಪೋತ್ಸವ ನಿಮಿತ್ತ 3 ದಿನಗಳ ಕಾಲ ಬಾರ್ಕೂರಿನಲ್ಲಿ ಜಾನಪದ ಜಾತ್ರೆ, ಕೌಶಲ ಮೇಳ, ಫಲಪುಷ್ಪ ಪ್ರದರ್ಶನ, ಸಿರಿ ಜಾತ್ರೆ, ಸಾವಯವ ಜಾತ್ರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಲ್ಲದೆ ಅಲುಪ ದೊರೆಗಳಿಗೆ ಸಂಬಂಧಿಸಿದಂತೆ ವಿಚಾರ ಸಂಕಿರಣ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಲಾಗುವುದು. ಪ್ರಸಿದ್ಧ ಚಿತ್ರಕಲಾವಿದರಿಂದ ಬಾರ್ಕೂರಿನ ಇತಿಹಾಸದ ಬಗ್ಗೆ ಚಿತ್ರ ಬಿಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಒಂದು ಕೋ.ರೂ. ಹಾಗೂ ತೋಟಗಾರಿಕಾ ಇಲಾಖೆಯಿಂದ 25 ಲಕ್ಷ ರೂ.ಬಿಡುಗಡೆಯಾಗಲಿದೆ. ಈ ಸಂಬಂಧ ಈಗಾಗಲೇ ತಾನು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಹಾಗೂ ತೋಟಗಾರಿಕೆ ಸಚಿವ ಮನಗೂಳಿ ಅವರೊಂದಿಗೆ ಮಾತನಾಡಿದ್ದು, ಅನುದಾನ ಬಿಡುಗಡೆಗೆ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಾಕ್ಸ್‌-

ಅಂಚೆ ಚೀಟಿ ಬಿಡುಗಡೆ : ಅಲುಪೋತ್ಸವ ಅಂಗವಾಗಿ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಾಗುವುದು.ಉತ್ಸವದ ಯಶಸ್ಸಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಥಳೀಯರನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗಿದೆ ಎಂದು ಸಚಿವೆ ಜಯಮಾಲಾ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಬಾರ್ಕೂರು ಸಂತೋಷ್‌ ಗುರೂಜಿ ಉಪಸ್ಥಿತರಿದ್ದರು.

ಫೋಟೊ 27ಯುಕೆ ಅಲುಪ : ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಲುಪೋತ್ಸವ ಕುರಿತು ಪೂರ್ವಭಾವಿ ಸಭೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ