ಆ್ಯಪ್ನಗರ

ಆಯುಷ್ಮಾನ್‌ ಭಾರತ್‌ ಯೋಜನೆ ನಿಯಮ ಸಡಿಲ : ಶೋಭಾ ಕರಂದ್ಲಾಜೆ

ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ್‌ ಯೋಜನೆಯಡಿ 200 ಕ್ಕೂ ಅಧಿಕ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುವ ಅವಕಾಶವಿದ್ದು, ನಿಬಂಧನೆಗಳನ್ನು ಸಡಿಲಗೊಳಿಸಿ ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ಸಿಗುವಂತೆ ಮಾಡಲಾಗುವುದೆಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Vijaya Karnataka 11 Jun 2019, 5:00 am
ಉಡುಪಿ: ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ್‌ ಯೋಜನೆಯಡಿ 200 ಕ್ಕೂ ಅಧಿಕ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುವ ಅವಕಾಶವಿದ್ದು, ನಿಬಂಧನೆಗಳನ್ನು ಸಡಿಲಗೊಳಿಸಿ ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ಸಿಗುವಂತೆ ಮಾಡಲಾಗುವುದೆಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
Vijaya Karnataka Web UDP-10dk SHOBHA (1)


ಅವರು ಬಿಜೆಪಿಯ ಕಾಪು ವಿಧಾನ ಕ್ಷೇತ್ರದ ಪೆರ್ಡೂರು ಮತ್ತು ಹಿರಿಯಡ್ಕ ಮಹಾಶಕ್ತಿ ಕೇಂದ್ರದ ವತಿಯಿಂದ ಹಿರಿಯಡ್ಕ ವೀರಭದ್ರ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸೋಮವಾರ ನಡೆದ ಸನ್ಮಾನ ಮತ್ತು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ್‌ನಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ಪಡೆಯುವ ಅವಕಾಶವಿದ್ದರೂ ರಾಜ್ಯ ಸರಕಾರದ ಕೆಲ ಎಡವಟ್ಟಿನಿಂದಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆದಿದ್ದು, ಕೂಡಲೇ ಕೆಲ ನಿಬಂಧನೆಗಳನ್ನು ತೊಡೆದು ಹಾಕಿ ಅರ್ಹರಿಗೆ ಸುಲಭವಾಗಿ ಚಿಕಿತ್ಸೆ ಸಿಗುವಂತೆ ಮಾಡುವುದಾಗಿ ಭರವಸೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಕುಯಿಲಾಡಿ ಸುರೇಶ್‌ ನಾಯಕ್‌ ಸಹಿತ ಪ್ರಮುಖರನ್ನು ಸನ್ಮಾನಿಸಲಾಯಿತು.

ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಯಶ್‌ಪಾಲ್‌ ಎ. ಸುವರ್ಣ, ಕುತ್ಯಾರು ನವೀನ್‌ ಶೆಟ್ಟಿ, ಪಾದೆಬೆಟ್ಟು ಪ್ರಕಾಶ್‌ ಶೆಟ್ಟಿ, ಆತ್ರಾಡಿ ಸತ್ಯಾಂದ ನಾಯಕ್‌, ಸಂಧ್ಯಾ ರಮೇಶ್‌, ನಯನಾ ಗಣೇಶ್‌, ಶಿಲ್ಪಾ ಸುವರ್ಣ, ಸವಿತಾ ನಾಯಕ್‌, ಸುಭಾಸ್‌ ನಾಯಕ್‌, ಸುನೀತಾ, ಅಬೂಬಕರ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ