ಆ್ಯಪ್ನಗರ

ಅಂತರ್‌ ಜಿಲ್ಲಾ ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಚಾಲನೆ

ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಆಶ್ರಯದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಪ್ರಕಾಶ್‌ ಎಂ. ಕೊಡವೂರು ಸ್ಮರಣಾರ್ಥ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಅಂತರ್‌ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಲಾಯಿತು.

Vijaya Karnataka 2 Dec 2018, 5:00 am
ಉಡುಪಿ: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಆಶ್ರಯದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಪ್ರಕಾಶ್‌ ಎಂ. ಕೊಡವೂರು ಸ್ಮರಣಾರ್ಥ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಅಂತರ್‌ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಲಾಯಿತು.
Vijaya Karnataka Web badminton


ಪ್ರಕಾಶ್‌ ಎಂ. ಕೊಡವೂರು ಅವರ ತಂದೆ ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧೀಕ್ಷಕ ಎಂಜಿನಿಯರ್‌ ಎಚ್‌.ಟಿ. ಪೂಜಾರಿ ದೀಪ ಬೆಳಗಿಸಿ ಚಾಲನೆ ನೀಡಿ, ಪಂದ್ಯಾವಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸುವ ಪ್ರಯತ್ನದಲ್ಲಿದ್ದೇವೆ. ಇದರ ಸಫಲತೆಗೆ ವಿದ್ಯಾರ್ಥಿಗಳ ಪ್ರಾಮಾಣಿಕ ಪರಿಶ್ರಮ ಅಗತ್ಯವಿದೆ ಎಂದರು.

ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಕಾರ್ಯದರ್ಶಿ ವೈ. ಸುಧೀರ್‌ ಕುಮಾರ್‌, ಕೋಶಾಧಿಕಾರಿ ಕಾಶೀರಾಮ್‌ ಪೈ, ಹರಿಯಪ್ಪ ಅಮೀನ್‌ ಉಪಸ್ಥಿತರಿದ್ದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಅವಳಿ ಜಿಲ್ಲೆಗಳಿಂದ 200ಕ್ಕೂ ಅಧಿಕ ಕ್ರೀಡಾಳುಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ