ಆ್ಯಪ್ನಗರ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ, ಬಸವರಾಜ ಬೊಮ್ಮಾಯಿ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 20 Feb 2021, 1:46 pm
ಉಡುಪಿ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ಮಾತನಾಡಿದ ಅವರು 3 ವರ್ಷಗಳಲ್ಲಿ 17 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
Vijaya Karnataka Web Basavaraj Bommai


ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿ, ಈಗಾಗಲೇ 7 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ ೩ ವರ್ಷಗಳ ಅವಧಿಯಲ್ಲಿ ಒಟ್ಟು 17 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ ವಾಗಿದೆ. ಮಾನವ ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಪ್ರಚೋದನಾಕಾರಿ ಭಾಷಣ: ಪಿಎಫ್‌ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮ, ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್. ಇದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.

ನಾಲ್ಕು ಎಫ್‌ಎಸ್‌ಎಲ್‌ ಕೇಂದ್ರಗಳ ಸ್ಥಾಪನೆ


ರಾಜ್ಯದಲ್ಲಿರುವ ನಾಲ್ಕು ವಿಭಾಗಗಳಲ್ಲಿ ಒಂದೊಂದು ಅತ್ಯಂತ ಸುಸಜ್ಜಿತ ಎಫ್‌ಎಸ್ಎಲ್‌ ತನಿಖಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ಹೆಚ್ವುತ್ತಿರುವ ಸೈಬರ್ ಕ್ರೈಮ್ ನ್ಮು ಮಟ್ಟ ಹಾಕಲಾಗುವುದು. ಬೆಳಗಾವಿ, ಮೈಸೂರು, ಮಂಗಳೂರು, ಕಲಬುರಗಿ ವಿಭಾಗಗಳಲ್ಲಿ ತಲಾ ಒಂದು ಎಫ್ ಎಸ್ ಎಲ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಪೊಲೀಸ್ ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮಾರ್ಚ್ ೩೧ ರೊಳಗಾಗಿ ಅವರು ವರದಿ ಸಲ್ಲಿಸಲಿದ್ದಾರೆ. ಪೊಲೀಸ್ ವ್ಯವಸ್ಥೆ ಸುಧಾರಿಸಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಎಲ್ಲ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಠಾಣೆ

ಹತ್ತು ವರ್ಷಗಳ‌ ಹಿಂದೆ ಸೈಬರ್ ಅಪರಾಧಗಳು ಇರಲಿಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಸೈಬರ್ ಅಪರಾಧ ಗಳು ಹೆಚ್ವುತ್ತಿವೆ. ಪೊಲೀಸ್ ಇಲಾಖೆಗೆ ಇದು ಹೊಸ ಸವಾಲು ಒಡ್ಡಿದೆ. ಈ ಅಪರಾಧ ಮಟ್ಟ ಹಾಕಲು ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಠಿ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆದೇಶಿಸಿಸ್ದೇನೆ ಎಂದು ಅವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ