ಆ್ಯಪ್ನಗರ

ಬೃಹತ್‌ ರಕ್ತದಾನ ಶಿಬಿರ ಉದ್ಘಾಟನೆ

ಸಮಾಜಮುಖಿ ಕಾರ್ಯಗಳಿಂದ ಮೊಗವೀರ ಸಂಘಟನೆ ಎಲ್ಲ ಸಂಘಟನೆಗಳಿಗೂ ಮಾದರಿಯಾಗಿದೆ. ರಕ್ತಕ್ಕೆ ವರ್ಷವಿಡಿ ನಿರಂತರ ಬೇಡಿಕೆ ಇರುತ್ತದೆ. ಜೀವ ಉಳಿಸುವ ರಕ್ತದಾನಕ್ಕೆ ಎಲ್ಲರೂ ಮುಂದಾಗಬೇಕು ಎಂದು ಕೋಟ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ , ಉದ್ಯಮಿ ಆನಂದ್‌ ಸಿ.ಕುಂದರ್‌ ಹೇಳಿದರು.

Vijaya Karnataka 17 Jun 2019, 5:00 am
ಕೋಟ: ಸಮಾಜಮುಖಿ ಕಾರ್ಯಗಳಿಂದ ಮೊಗವೀರ ಸಂಘಟನೆ ಎಲ್ಲ ಸಂಘಟನೆಗಳಿಗೂ ಮಾದರಿಯಾಗಿದೆ. ರಕ್ತಕ್ಕೆ ವರ್ಷವಿಡಿ ನಿರಂತರ ಬೇಡಿಕೆ ಇರುತ್ತದೆ. ಜೀವ ಉಳಿಸುವ ರಕ್ತದಾನಕ್ಕೆ ಎಲ್ಲರೂ ಮುಂದಾಗಬೇಕು ಎಂದು ಕೋಟ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ , ಉದ್ಯಮಿ ಆನಂದ್‌ ಸಿ.ಕುಂದರ್‌ ಹೇಳಿದರು.
Vijaya Karnataka Web mogaveera


ಸಾಲಿಗ್ರಾಮದ ಕರಾವಳಿ ಮೊಗವೀರ ಸಭಾಭವದಲ್ಲಿ ಭಾನುವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷ ಚಂದ್ರ ಬಂಗೇರ ಅಧ್ಯಕ್ಷ ತೆ ವಹಿಸಿದ್ದರು. ಘಟಕದ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್‌ ಮರಕಾಲ, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಘವೇಂದ್ರ ರಾವ್‌, ಮಣಿಪಾಲ ಕೆಎಂಸಿಯ ಡಾ.ದೀಪಿಕಾ, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಸ್ಟರ್‌ ಮಿಣ್ಣು , ಉದ್ಯಮಿ ಆನಂದ್‌ ಗುಂಡ್ಮಿ, ಜಿಲ್ಲಾ ಸಂಘಟನೆ ಮಾಜಿ ಅಧ್ಯಕ್ಷ ಗಣೇಶ್‌ ಕಾಂಚನ್‌, ಸಾಲಿಗ್ರಾಮ ಘಟಕದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ಮಹಿಳಾ ಸಂಘಟನೆ ಅಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು.

ಈ ಸಂದರ್ಭ ಶಿರೂರು ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ನ ಮುಖ್ಯಸ್ಥ ಜಯರಾಮ್‌ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕೋಟದ ಗೀತಾನಂದ ಫೌಂಡೇಶನ್‌ ವತಿಯಿಂದ ಸಸಿ ವಿತರಿಸಲಾಯಿತು. ಸಾಲಿಗ್ರಾಮ ಘಟಕ ಗೌರವಾಧ್ಯಕ್ಷ ಶೇಖರ್‌ ಮರಕಾಲ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್‌ ಕುಂದರ್‌ ಕಾರ್ಯಕ್ರಮ ನಿರೂಪಿಸಿದರು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಸಾಲಿಗ್ರಾಮ ಘಟಕ, ಮಹಿಳಾ ಸಂಘಟನೆ, ಉಡುಪಿ ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ, ಜಿಲ್ಲಾಡಳಿತ, ಕರಾವಳಿ ಮೊಗವೀರ ಮಹಾಜನ ಸಂಘ, ದೃಷ್ಟಿದಾನ ಯೋಜನೆ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿರೂರು ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಸಂಘಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ