ಆ್ಯಪ್ನಗರ

ರಾಜ್ಯದ ಪ್ರತಿ ಗ್ರಾಮದಲ್ಲೂ ಕಮಲ ಅರಳಿಸುವ ಸಂಕಲ್ಪ ಮಾಡಿ: ಡಿಸಿಎಂ ಅಶ್ವತ್ಥನಾರಾಯಣ ಕರೆ!

ರಾಷ್ಟ್ರೀಯ ಮಟ್ಟದಲ್ಲಿ ಸರಿಸಾಟಿ ಇಲ್ಲದ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ, ಇನ್ನೂ ಪಂಚಾಯಿತಿ ಮಟ್ಟದಲ್ಲೂ ಬಲಿಷ್ಠವಾಗಿ ಬೆಳೆಯಬೇಕು ಹಾಗೂ ಗ್ರಾಮ ಗ್ರಾಮದಲ್ಲೂ ಕಮಲ ಅರಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

Vijaya Karnataka Web 27 Nov 2020, 3:29 pm
ಉಡುಪಿ: ರಾಷ್ಟ್ರೀಯ ಮಟ್ಟದಲ್ಲಿ ಸರಿಸಾಟಿ ಇಲ್ಲದ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ, ಇನ್ನೂ ಪಂಚಾಯಿತಿ ಮಟ್ಟದಲ್ಲೂ ಬಲಿಷ್ಠವಾಗಿ ಬೆಳೆಯಬೇಕು ಹಾಗೂ ಗ್ರಾಮ ಗ್ರಾಮದಲ್ಲೂ ಕಮಲ ಅರಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
Vijaya Karnataka Web Ashwath Narayan
ಉಡುಪಿಯಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಉದ್ಘಾಟಿಸಿದ ಡಿಸಿಎಂ


ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕೋಟೇಶ್ವರದಲ್ಲಿ ಇಂದು(ನ.27-ಶುಕ್ರವಾರ) ಬಿಜೆಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅಶ್ವತ್ಥನಾರಾಯಣ, ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಪಕ್ಷ ಗ್ರಾಮೀಣ ಪ್ರದೇಶದ ಪ್ರತಿಹಳ್ಳಿಗೂ ವಿಸ್ತರಿಸಬೇಕು. ಎಲ್ಲೆಲ್ಲೂ ಪಕ್ಷದ ಚುನಾಯಿತ ಪ್ರತಿನಿಧಿಗಳು ಇರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಹತ್ತು ಹಲವು ಸುಧಾರಣೆಗಳ ಮೂಲಕ ಜನರಿಗೆ ಅನುಕೂಲವಾದ ಕಾರ್ಯಗಳನ್ನು ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮೂಲಸೌಕರ್ಯಗಳಿಗೆ ಅಪಾರ ಅನುದಾನ ಒದಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ರಾಜ್ಯ ಸರ್ಕಾರದ ಸಾಧನೆಯನ್ನು ಬಿಚ್ಚಿಟ್ಟರು.

ಮಾಗಡಿಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ರೌಂಡ್ಸ್;‌ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಅಡಿಗಲ್ಲು

ಗ್ರಾಮ ಸ್ವರಾಜ್ಯ ಎಂದರೆ ಗ್ರಾಮ ಮಟ್ಟದಲ್ಲಿಯೇ ಅತ್ಯುತ್ತಮ ಆಡಳಿತ ವ್ಯವಸ್ಥೆಯನ್ನು ಕಲಿಸುವುದು ಎಂದರ್ಥ. ಈಗಲೂ ರಾಜ್ಯದಲ್ಲಿ ಬಯಲು ಬಹಿರ್ದೆಸೆ ಜೀವಂತವಾಗಿದೆ. ಅದನ್ನು ನಿವಾರಿಸಬೇಕಾಗಿದೆ. ಪ್ರತಿಯೊಬ್ಬರ ಮನೆಗಳಲ್ಲೂ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಪ್ರಧಾನಿಯವರ ಸ್ವಚ್ಛ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಬೇಕು ಎಂದು ಡಿಸಿಎಂ ನುಡಿದರು.


ಹಳ್ಳಿ ಮಟ್ಟದ ಯಾವುದೇ ಅಭಿವೃದ್ಧಿ ಕೆಲಸಕ್ಕೂ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟಕ್ಕೆ ಬರುವ ಪರಿಸ್ಥಿತಿ ಇರಬಾರದು. ಆ ನಿಟ್ಟಿನಲ್ಲಿ ಕೆಲಸ ಮಾಡಲು ಬಿಜೆಪಿ ಸಿದ್ಧವಾಗಿದೆ. ಈ ಉದ್ದೇಶಗಳ ಸಾಕಾರಕ್ಕಾಗಿ ಪಕ್ಷವು ಎಲ್ಲ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಬೇಕಾಗಿದೆ ಎಂದು ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಪಂಚಾಯಿತಿ ಚುನಾವಣೆಯಲ್ಲಿ ಪ್ರತಿಯೊಬ್ಬರು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಪಕ್ಷದ ಹಿತಿದೃಷ್ಟಿಯಿಂದ ವರ್ತಿಸಬೇಕು. ಜನಸಂಪರ್ಕವನ್ನು ದ್ವಿಗುಣಗೊಳಿಸುವ ಮೂಲಕ ಗ್ರಾಮ ಮಟ್ಟದ ಘಟಕಗಳ ಬಲವರ್ಧನೆ ಮಾಡಬೇಕು ಎಂದು ಡಿಸಿಎಂ ಸಲಹೆ ಮಾಡಿದರು.

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ, ಡಾ.ಅಶ್ವತ್ಥನಾರಾಯಣ ಘೋಷಣೆ

ವಿ.ಎಸ್. ಆಚಾರ್ಯರಿಗೆ ಗೌರವ:

ಇದೇ ವೇಳೆ ಸಭೆಗೂ ಮುನ್ನ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಾ.ವಿ.ಎಸ್.‌ ಆಚಾರ್ಯ ಅವರ ಪ್ರತಿಮೆಗೆ ಡಾ.ಅಶ್ವತ್ಥನಾರಾಯಣ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಸಂಸದರಾದ ಶೋಭಾ ಕರಂದ್ಲಾಜೆ, ಮುನಿಸ್ವಾಮಿ, ಶಾಸಕ ರಘುಪತಿ ಭಟ್‌ ಮುಂತಾದವರರು ಹಾಜರಿದ್ದರು.

ಬಿಜೆಪಿ ಒಡೆಯಲು ಸಾಧ್ಯವಿಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಬಳಿಕ ಬಿಜೆಪಿ ಮುಖಂಡರೊಂದಿಗೆ ಕೃಷ್ಣಮಠಕ್ಕೆ ತೆರಳಿದ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ಗೋಮಾತೆಗೆ ಪೂಜೆ ಸಲ್ಲಿಸಿ ಶ್ರೀಕೃಷ್ಣ ದರ್ಶನ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ