ಆ್ಯಪ್ನಗರ

ಠಾಕ್ರೆ ಹೇಳಿಕೆಗೆ ತಲೆಕೆಡಿಸಿಕೊಳ್ಳಬೇಡಿ, ನಮ್ಮ ಒಂದಿಂಚೂ ಭೂಮಿ ಬಿಟ್ಟುಕೊಡಲ್ಲ: ಬಿಎಸ್‌ವೈ

ಕರ್ನಾಟಕದಲ್ಲಿ ಮರಾಠರು ಕನ್ನಡಿಗರು ಒಂದೇ ತಾಯಿಯ ಮಕ್ಕಳಂತೆ ಬದುಕುತ್ತಿದ್ದಾರೆ. ಮಹಾರಾಷ್ಟ್ರದ ಗಡಿ ಜಿಲ್ಲೆಯಲ್ಲಿ ಕನ್ನಡಗರು ಮರಾಠಿಗರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡು ಸೌಹಾರ್ದಯುತವಾಗಿ ಬಾಳುತ್ತಿದ್ದಾರೆ. ಈ ಸೌಹಾರ್ದಯುತ ವಾತಾವರಣ ಕೆಡಿಸುವ, ಅಶಾಂತಿ ಮೂಡಿಸುವ ಕೆಲಸ ಮಾಡುವುದು ಗೌರವ ತರುವ ಸಂಗತಿಯಲ್ಲ.

Vijaya Karnataka Web 18 Jan 2021, 6:20 pm
ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ರಾಜಕೀಯ ಪ್ರೇರಿತ ಹೇಳಿಕೆಗೆ ಯಾರೂ ಕೂಡಾ ತಲೆಕೆಡಿಸಿಕೊಳ್ಳಬಾರದು. ಕರ್ನಾಟಕದ ಯಾವ ಭಾಗದ ಒಂದಿಂಚೂ ಭೂಮಿ ಕೊಡುವ ಪ್ರಮೇಯವೇ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಠಾಕ್ರೆ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
Vijaya Karnataka Web ಬಿಎಸ್‌ ಯಡಿಯೂರಪ್ಪ
ಬಿಎಸ್‌ ಯಡಿಯೂರಪ್ಪ


ಜಿಲ್ಲೆಯಲ್ಲಿ ಶ್ರೀಕೃಷ್ಣ ಮಠ ಸಹಿತ ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಹಾಗೂ ಅಭಿವೃದ್ಧಿ ಕಾಮಗಾರಿ ನಿಮಿತ್ತ ಉಡುಪಿಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಸಿಎಂ ಸೋಮವಾರ ಆದಿ ಉಡುಪಿ ಹೆಲಿಪ್ಯಾಡ್‍ಗೆ ಬಂದಿಳಿದಿದ್ದು, ಮಾಧ್ಯಮದೊಂದಿಗೆ ಮಾತನಾಡಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಅವರ ಹೇಳಿಕೆ ಉದ್ದಟತನದಿಂದ ಕೂ ಡಿದೆ. ಇದು ಭಾರತೀಯ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವ ನಿಲುವು. ಮಹಾಜನ್ ವರದಿಯೇ ಅಂತಿಮವೆಂದು ಎಲ್ಲರಿಗೂ ಗೊತ್ತಿದ್ದರೂ ಸಹ ಮತ್ತೆ ಮತ್ತೆ ವಿಷಯವನ್ನು ಕೆದುಕುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಮರಾಠರು ಕನ್ನಡಿಗರು ಒಂದೇ ತಾಯಿಯ ಮಕ್ಕಳಂತೆ ಬದುಕುತ್ತಿದ್ದಾರೆ. ಮಹಾರಾಷ್ಟ್ರದ ಗಡಿ ಜಿಲ್ಲೆಯಲ್ಲಿ ಕನ್ನಡಗರು ಮರಾಠಿಗರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡು ಸೌಹಾರ್ದಯುತವಾಗಿ ಬಾಳುತ್ತಿದ್ದಾರೆ. ಈ ಸೌಹಾರ್ದಯುತ ವಾತಾವರಣ ಕೆಡಿಸುವ, ಅಶಾಂತಿ ಮೂಡಿಸುವ ಕೆಲಸ ಮಾಡುವುದು ಉದ್ಭವ್ ಠಾಕ್ರೆಗೆ ಗೌರವ ತರುವ ಸಂಗತಿಯಲ್ಲ. ಠಾಕ್ರೆಯವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದರು.

ಗಡಿ ವಿಚಾರಕ್ಕೆ ತಗಾದೆ ತೆಗೆದು ರಾಜಕೀಯ ಮಾಡುವುದನ್ನು ನಿಲ್ಲಿಸಿ. ಯಾವ ಕಾರಣಕ್ಕೂ ಯಾವ ಭಾಗದ ಒಂದಿಂಚೂ ಭೂಮಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಕನ್ನಡ ಪರ ಸಂಘಟನೆಗಳ ಆಕ್ರೋಶದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್‍ವೈ, ಸಹಜವಾಗಿ ಇಂತಹ ಹೇಳಿಕೆ ಕನ್ನಡಪರ ಸಂಘಟನೆಗಳ ಜತೆಗೆ ಇತರರಿಗೂ ಆಕ್ರೋಶ ತರುತ್ತದೆ. ಈ ರೀತಿಯ ರಾಜಕೀಯ ಹೇಳಿಕೆಗೆ ಯಾರೂ ತಲೆಕೆಡಿಸಿಕೊಳ್ಳಬಾರದು. ಕನ್ನಡಿಗಾರ ನಾವೆಲ್ಲರೂ ಒಟ್ಟಾಗಿ, ಒಗ್ಗಟ್ಟಿನಿಂದ ಮುಂದುವರಿಯೋಣ ಎಂದು ಯಡಿಯೂರಪ್ಪ ಮನವಿ ಮಾಡಿದರು.

ಸಿಎಂಗೆ ಸ್ವಾಗತ

ಆದಿ ಉಡುಪಿ ಹೆಲಿಪ್ಯಾಡ್‍ಗೆ ಬಂದಿಳಿದ ಸಿಎಂ ಬಿಎಸ್‍ವೈ ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ವಾಗತಿಸಿದರು. ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರಾಯ್, ಎಸ್ಪಿ ಎನ್. ವಿಷ್ಣುವರ್ಧನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಕಾರಿ ಡಾ. ನವೀನ್ ಭಟ್ ವೈ., ಎಸಿ ರಾಜು ಹಾಜರಿದ್ದರು. ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ