ಆ್ಯಪ್ನಗರ

ಮಲ್ಪೆಯಲ್ಲಿ ಯಕ್ಷ ಗಾನದ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಭಾನುವಾರ ಮಲ್ಪೆ ಬೀಚ್‌ನಲ್ಲಿ ಮತದಾನ ಜಾಗೃತಿಗಾಗಿ ಸಿದ್ಧಪಡಿಸಿರುವ ಯಕ್ಷ ಗಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಅವರು ಚಂಡೆ ಬಾರಿಸುವ ಮೂಲಕ ಚಾಲನೆ ನೀಡಿದರು.

Vijaya Karnataka 1 Apr 2019, 5:00 am
ಉಡುಪಿ: ಉಡುಪಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಭಾನುವಾರ ಮಲ್ಪೆ ಬೀಚ್‌ನಲ್ಲಿ ಮತದಾನ ಜಾಗೃತಿಗಾಗಿ ಸಿದ್ಧಪಡಿಸಿರುವ ಯಕ್ಷ ಗಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಅವರು ಚಂಡೆ ಬಾರಿಸುವ ಮೂಲಕ ಚಾಲನೆ ನೀಡಿದರು.
Vijaya Karnataka Web 111


ಸಮೃದ್ಧಿ ಪುರದ ಮಹಾರಾಜನ ಕಥಾ ಹಿನ್ನಲೆ ಹೊಂದಿರುವ ಈ ಯಕ್ಷ ಗಾನದಲ್ಲಿ, ಪುತ್ರ ಸಂತಾನವಿಲ್ಲದ ಮಹಾರಾಜ ತನ್ನ ಉತ್ತರಾಧಿಕಾರಿಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಅಂದರೆ ಮತದಾನದ ಮೂಲಕ ಆಯ್ಕೆ ಮಾಡುವ ಕಥೆ ಇದಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗದೇ ಪ್ರತಿಯೊಬ್ಬರೂ ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎನ್ನುವ ಸಂದೇಶ ಈ ಯಕ್ಷ ಗಾನದಲ್ಲಿದೆ.

ಕೋಟದ ಕಲಾಪೀಠ ತಂಡದ ಕಲಾವಿದರು ಈ ಯಕ್ಷ ಗಾನ ಪ್ರಸಂಗವನ್ನು ಪ್ರದರ್ಶಿಸುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಜನಜಾಗೃತಿ ಮೂಡಿಸುವ ಮೂಲಕ ಮತದಾನ ಹೆಚ್ಚಳಕ್ಕೆ ಜಿಲ್ಲಾ ಸ್ವೀಪ್‌ ಸಮಿತಿ ಈ ಕಾರ್ಯಕ್ರಮ ಆಯೋಜಿಸಿದೆ.

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ, ಜಿ.ಪ0. ಸಿಇಓ ಸಿಂಧು ಬಿ. ರೂಪೇಶ್‌, ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌, ಉಡುಪಿ ತಾ.ಪಂ ಇಓ ರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭುಜಬಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಡಿಹೆಚ್‌ಓ ಡಾ.ಓಂ ಪ್ರಕಾಶ್‌ ಕಟ್ಟೀಮನಿ, ಬೈಂದೂರು ಕ್ಷೇತ್ರ ಶಿಕ್ಷ ಣಾಧಿಕಾರಿ ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು.

ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿ, ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ