ಆ್ಯಪ್ನಗರ

ಉದ್ಯಾವರ ಗಾಂಧಿ ಯಾನ ಪಾದಯಾತ್ರೆಗೆ ಚಾಲನೆ ನೀಡಿ ಈಶ್ವರ್‌ ಖಂಡ್ರೆ

ದೇಶದ ಎಲ್ಲಾ ವರ್ಗದ ಜನರ ಹಿತಾಸಕ್ತಿಯನ್ನು ಕಾಯಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಸುಳ್ಳು ಪ್ರಚಾರ ಮತ್ತು ನಕಲಿ ಕಾರ್ಯಕ್ರಮಗಳ ಮೂಲಕ ಜನರ ದಾರಿ ತಪ್ಪಿಸುವವರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡುವ ಅಗತ್ಯವಿದೆ. ಕಾಂಗ್ರೆಸ್‌ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

Vijaya Karnataka 26 Feb 2019, 5:00 am
ಕಟಪಾಡಿ: ದೇಶದ ಎಲ್ಲಾ ವರ್ಗದ ಜನರ ಹಿತಾಸಕ್ತಿಯನ್ನು ಕಾಯಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಸುಳ್ಳು ಪ್ರಚಾರ ಮತ್ತು ನಕಲಿ ಕಾರ್ಯಕ್ರಮಗಳ ಮೂಲಕ ಜನರ ದಾರಿ ತಪ್ಪಿಸುವವರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡುವ ಅಗತ್ಯವಿದೆ. ಕಾಂಗ್ರೆಸ್‌ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
Vijaya Karnataka Web UDP-25ha udya


ಸೋಮವಾರ ಉಡುಪಿ ಜಿಲ್ಲಾ ರಾಜೀವ್‌ ಗಾಂಧಿ ಪಂಚಾಯಿತಿ ರಾಜ್‌ ಸಂಘಟನೆ ವತಿಯಿಂದ ಮಹಾತ್ಮ ಗಾಂಧೀಜಿ ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಯಾವರ ಹೊಳೆಯ ಕಡವಿನ ಭಾಗಿನಿಂದ ಯಾತ್ರೆ ಮುಂದುವರಿಸಿರುವ ನೆನಪಿಗಾಗಿ ಉದ್ಯಾವರದಿಂದ ಉಡುಪಿಯವರೆಗೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯ ಆಶಯದಂತೆ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಳ್ಳಿಗಳ ಸಬಲೀಕರಣಕ್ಕೆ ಒತ್ತು ನೀಡಿ ಕಾಂಗ್ರೆಸ್‌ ಪಕ್ಷ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. ಇಂದು ರಾಜಕೀಯ ಲಾಭಕ್ಕಾಗಿ ಗಾಂಧೀಜಿ ಹೆಸರನ್ನು ಹೈಜಾಕ್‌ ಮಾಡಿರುವ ಬಿಜೆಪಿ ಪಕ್ಷ ಗಾಂಧೀಜಿಯವರ ಬಗ್ಗೆ ದ್ವಂದ್ವ ನಿಲುವು ಹೊಂದಿದೆ. ಒಂದೆಡೆ ಕಾಂಗ್ರೆಸ್‌ನ ನಿರ್ಮಲ ಭಾರತ ಯೋಜನೆಯನ್ನು ಸ್ವಚ್ಛ ಭಾರತ್‌ ಯೋಜನೆಯ ಹೆಸರಲ್ಲಿ ನಕಲಿ ಮಾಡಿರುವ ಬಿಜೆಪಿ ಇನ್ನೊಂದೆಡೆ ಗಾಂಧೀಜಿಯವರ ಪ್ರತಿಕೃತಿಗೆ ಗುಂಡು ಹೊಡೆಯುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರದ ಅನೇಕ ಜನಪರ ಯೋಜನೆಗಳು ತಮ್ಮವೇ ಎಂಬಂತೆ ಬಿಂಬಿಸಲಾಗುತ್ತಿದೆ ಇದರ ವಿರುದ್ಧ ಜನಾಗೃತಿ ಮೂಡಿಸಬೇಕಾಗಿದೆ ಎಂದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕ ಗೋಪಾಲ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದಶಿಗಳಾದ ಪಿವಿ. ಮೋಹನ್‌, ಜಿ.ಎ.ಬಾವ, ಕೆಪಿಸಿಸಿ ಕಾರ್ಯದರ್ಶಿಗಳಾ ವೆರೋನಿಕಾ ಕರ್ನೇಲಿಯೋ, ಮುರಳಿ ಶೆಟ್ಟಿ, ಸಂಘಟನೆಯ ರಾಜ್ಯ ಸಂಚಾಲಕ ರಂಗಸ್ವಾಮಿ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಗೀತಾ ವಾಗ್ಲೆ, ಉದ್ಯಾವರ ಗ್ರಾ.ಪಂ ಅಧ್ಯಕ್ಷೆ ಸುಗಂಧಿ ಶೇಖರ್‌, ಉದ್ಯಾವರ ನಾಗೇಶ್‌ ಕುಮಾರ್‌ ಮತ್ತು ಉದ್ಯಾವರ ಕಾಂಗ್ರೆಸ್‌ ಪಕ್ಷ ದ ಕಾರ್ಯಕರ್ತರು, ಜಿಲ್ಲೆಯ ನಾನಾ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು ಜನಪ್ರತಿನಿಧಿಗಳು ಮತ್ತು ಕಾಂಗ್ರೆಸ್‌ ಪಕ್ಷ ದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಸಂಘಟನೆಯ ಪದಾಧಿಕಾರಿಗಳಾದ ರೋಶನಿ ವಲಿವೀರಾ ಸ್ವಾಗತಿಸಿ, ವಂದಿಸಿದರು. ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ