ಆ್ಯಪ್ನಗರ

ಸ್ಫೋಟಕ ವಿಡಿಯೋ ಸದ್ದು! ಕೆ.ಎಸ್ ಈಶ್ವರಪ್ಪ ಏಕೆ ಹೆಗಲು ಮುಟ್ಟಿ ನೋಡುತ್ತಿದ್ದಾರೆ? ಡಿಕೆಶಿ ಪ್ರಶ್ನೆ

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ವಿಚಾರವಾಗಿ ಸ್ಫೋಟಕ ವಿಡಿಯೋ ಕಾರಣ ಎಂದು ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಮ್ಮ ಆರೋಪವನ್ನು ಸಮರ್ಥನೆ ಮಾಡಿಕೊಂಡಿದ್ದರು ಈ ಕುರಿತಾಗಿ ತನಿಖೆ ಆಗಲಿ ಎಂದು ಒತ್ತಾಯಿಸಿದ್ದಾರೆ.

Vijaya Karnataka Web 29 Nov 2020, 12:31 pm
ಉಡುಪಿ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಡಿರುವ ವಿಡಿಯೋ ಆರೋಪದ ಕುರಿತಾಗಿ ಸಚಿವ ಕೆ.ಎಸ್‌ ಈಶ್ವರಪ್ಪ ಏಕೆ ಹೆಗಲು ಮುಟ್ಟಿ ನೋಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Vijaya Karnataka Web dk shivakumar


ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಯತ್ನ ಹಿನ್ನೆಲೆಯಲ್ಲಿ ವಿಡಿಯೋ ವಿಚಾರವಾಗಿ ಮಾಡಿರುವ ಆರೋಪದ ಕುರಿತಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆ ನಡೆಸುವುದಾಗಿ ತಿಳಿಸಿರುವುದು ಸ್ವಾಗತಾರ್ಹ ಎಂದರು.

ನಾಯಕತ್ವ ಬದಲಾವಣೆ ಚರ್ಚೆಯೇ ನಡೆದಿಲ್ಲ: ನಳಿನ್‌ ಕುಮಾರ್ ಕಟೀಲ್

ನನಗೆ ಇರುವ ಆಂತರಿಕ ಮಾಹಿತಿ ಪ್ರಕಾರ ಈ ವಿಚಾರವನ್ನು ಸಾರ್ವಜನಿಕರ ಗಮನಕ್ಕೆ ತಂದಿದ್ದೇನೆ. ಆದರೆ ಸಿ.ಡಿ ವಿಡಿಯೋಗೆ ಸಂಬಂಧಿಸಿದಂತೆ ಯಾರ ಹೆಸರನ್ನು ಉಲ್ಲೇಖ ಮಾಡಿಲ್ಲ. ಹೀಗಿದ್ದರೂ ಸಚಿವ ಕೆ.ಎಸ್ ಈಶ್ವರಪ್ಪ ಏಕೆ ಹೆಗಲು ಮುಟ್ಟಿ ನೋಡುತ್ತಿದ್ದಾರೆ ಎಂದು ಡಿಕೆಶಿ ಪ್ರಶ್ನಿಸಿದರು.

ರಾಜ್ಯದಲ್ಲಿ ಬೇಕಾದಷ್ಟು ಎಂಎಲ್‌ಸಿಗಳು ಇದ್ದಾರೆ, ಬೇಕಾದಷ್ಟು ಸಚಿವರು ಇದ್ದಾರೆ, ಯಾರು ಏನು ಎತ್ತ ಎಂದು ತನಿಖೆ ಆಗಲಿ ಎಂದು ಆಗ್ರಹಿಸಿದ ಅವರು ನನಗೆ ಈ ವಿಚಾರವಾಗಿ ಮೂರ್ನಾಲ್ಕು ತಿಂಗಳಿಂದ ಗೊತ್ತಿತ್ತು, ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಇತ್ತು, ಹೀಗಿದ್ದರೂ ನಾವು ಸುಮ್ಮನಿದ್ದೆವು. ಆದರೆ ಇದೀಗ ಸಂತೋಷ್ ಆತ್ಮಹತ್ಯೆ ಯತ್ನ ಸಂದರ್ಭದಲ್ಲಿ ಈ ವಿಚಾರ ಹೇಳಿದ್ದೇನೆ. ಇದರ ಬಗ್ಗೆ ತನಿಖೆ ನಡೆಯಲಿ ಎಂದು ಅವರು ಆಗ್ರಹಿಸಿದರು.

ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ ನನಗೆ ಗೊತ್ತಿದೆ. ಅವರ ಯಾವುದೋ ಒಂದು ವಿಡಿಯೋವನ್ನು ಬಳಸಿ ಒಬ್ಬ ಸಚಿವ ಹಾಗೂ ಎಂಎಲ್ ಸಿ ಬೆದರಿಕೆ ಹಾಕುತ್ತಿದ್ದರು. ಆ ವಿಡಿಯೋವನ್ನು ದೆಹಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಅಂತಾ ತಿಳಿದುಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬುದು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗವಾಗಲಿ ಎಂದು ಡಿಕೆಶಿ ಕಾರವಾರದಲ್ಲಿ ಶನಿವಾರ ಹೇಳಿಕೆ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ