ಆ್ಯಪ್ನಗರ

ಮಹಿಳೆಯರ ಸಬಲೀಕರಣದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪಾತ್ರ ಮಹತ್ವದ್ದು

ಸ್ತ್ರೀಶಕ್ತಿ ಸ್ವಸಹಾಯಗುಂಪುಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬುವ ಮೂಲಕ ಮಹಿಳೆಯರ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಹಾಗೂ ಜಿ.ಪಂ ಉಪಾಧ್ಯಕ್ಷೆ ಶಿಲಾ ಕೆ. ಶೆಟ್ಟಿ ಹೇಳಿದರು.

Vijaya Karnataka 3 Mar 2019, 5:00 am
ಕಟಪಾಡಿ : ಸ್ತ್ರೀಶಕ್ತಿ ಸ್ವಸಹಾಯಗುಂಪುಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬುವ ಮೂಲಕ ಮಹಿಳೆಯರ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಹಾಗೂ ಜಿ.ಪಂ ಉಪಾಧ್ಯಕ್ಷೆ ಶಿಲಾ ಕೆ. ಶೆಟ್ಟಿ ಹೇಳಿದರು.
Vijaya Karnataka Web shirvaj


ಅವರು ಶನಿವಾರ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಸಹಯೋಗದೊಂದಿಗೆ ಶಿರ್ವದ ಮಹಿಳಾ ಸೌಧದಲ್ಲಿ ನಡೆದ 'ಮಹಿಳಾ ಸಾಂಸ್ಕೃತಿಕ ಉತ್ಸವ-2019' ಉದ್ಘಾಟಿಸಿ ಮಾತನಾಡಿದರು.

ತಾ.ಪಂ ಸದಸ್ಯ ವಿಲ್ಸನ್‌ ರೋಡ್ರಿಗಸ್‌ ನಾನಾ ಮಳಿಗೆಗಳನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾರಿಜಾ ಪೂಜಾರ್ತಿ ಅಧ್ಯಕ್ಷ ತೆ ವಹಿಸಿದ್ದರು. ಶಾಸಕ ಲಾಲಾಜಿ ಆರ್‌. ಮೆಂಡನ್‌, ತಾಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ತಾಲೂಕು ಪಂಚಾಯತಿ ಸದಸ್ಯೆ ಗೀತಾ ವಾಗ್ಳೆ, ಶಿರ್ವ ಮಹಿಳಾ ಮಂಡಳಿಯ ಅಧ್ಯಕ್ಷೆ ಬಬಿತಾ ಜಗದೀಶ್‌ ಅರಸ್‌, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಉಪಸ್ಥಿತರಿದ್ದರು.

ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶ ಆರ್‌. ಚಂದ್ರಶೇಖರ್‌ ಸ್ವಾಗತಿಸಿದರು. ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿ ಪೂರ್ಣಿಮಾ ವಂದಿಸಿದರು. ಕವಯಿತ್ರಿ ಪೂರ್ಣಿಮಾ ಸುರೇಶ್‌ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭಕ್ಕೆ ಮೊದಲು ಶಿರ್ವ ಪಿ.ವಿ. ಸರ್ಕಲ್‌ನಿಂದ ಮಹಿಳಾ ಸೌಧದವರೆಗೆ ನಾನಾ ಮಹಿಳಾ ಕಲಾತಂಡಗಳಿಂದ ಶೋಭಾ ಯಾತ್ರೆ ನಡೆಯಿತು. ಬಳಿಕ ವಿಚಾರಗೋಷ್ಠಿ ಕವಿಗೋಷ್ಠಿ, ಯಕ್ಷ ಗಾನ, ಸುಗಮ ಸಂಗೀತ, ಏಕವ್ಯಕ್ತಿ ಪ್ರದರ್ಶನ, ಕರಕುಶಲ ವಸ್ತು ಪ್ರದರ್ಶನ, ಚಿತ್ರಕಲಾ ಪ್ರದರ್ಶನ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ