ಆ್ಯಪ್ನಗರ

ನಾಳೆ ಮಲ್ಪೆ ಬೀಚ್‌ನಲ್ಲಿ ರಾಜ್ಯಮಟ್ಟದ ಬೃಹತ್‌ ಮತ್ಸ್ಯ ಮೇಳ

ಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಆಶ್ರಯದಲ್ಲಿ ಮೀನುಗಾರಿಕಾ ಇಲಾಖೆ ಸಹಯೋಗದಲ್ಲಿ ರಾಜ್ಯಮಟ್ಟದ ಬೃಹತ್‌ ಮತ್ಸ್ಯಮೇಳ ಫಿಶ್‌ ಫೆಸ್ಟ್‌-2018 ಡಿ.30ರಂದು ಸಂಜೆ 5.30ಕ್ಕೆ ಮಲ್ಪೆ ಬೀಚ್‌ನ ಅಂಬಿಗರ ಚೌಡಯ್ಯ ವೇದಿಕೆಯಲ್ಲಿ ನಡೆಯಲಿದೆ.

Vijaya Karnataka 29 Dec 2018, 5:00 am
ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಆಶ್ರಯದಲ್ಲಿ ಮೀನುಗಾರಿಕಾ ಇಲಾಖೆ ಸಹಯೋಗದಲ್ಲಿ ರಾಜ್ಯಮಟ್ಟದ ಬೃಹತ್‌ ಮತ್ಸ್ಯಮೇಳ ಫಿಶ್‌ ಫೆಸ್ಟ್‌-2018 ಡಿ.30ರಂದು ಸಂಜೆ 5.30ಕ್ಕೆ ಮಲ್ಪೆ ಬೀಚ್‌ನ ಅಂಬಿಗರ ಚೌಡಯ್ಯ ವೇದಿಕೆಯಲ್ಲಿ ನಡೆಯಲಿದೆ.
Vijaya Karnataka Web malpe beach
ನಾಳೆ ಮಲ್ಪೆ ಬೀಚ್‌ನಲ್ಲಿ ರಾಜ್ಯಮಟ್ಟದ ಬೃಹತ್‌ ಮತ್ಸ್ಯ ಮೇಳ


ಫೆಡರೇಶನ್‌ನ ಅಧ್ಯಕ್ಷ ಯಶಪಾಲ್‌ ಸುವರ್ಣ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ರಾಜ್ಯ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಡಾ. ಜಿ. ಶಂಕರ್‌, ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ಸುನಿಲ್‌ ಕುಮಾರ್‌, ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ ಮತ್ತಿತರ ಜನಪ್ರತಿನಿಧಿಗಳು ಉಪಸ್ಥಿತರಿರುವರು.

ವಿಶೇಷತೆಗಳು: ತಾಜಾ ಮೀನಿನ ವೈವಿಧ್ಯಮಯ ಖಾದ್ಯಗಳ ಕೌಂಟರ್‌, ಸಾರ್ವಜನಿಕರಿಗಾಗಿ ಈಜು ಸ್ಪರ್ಧೆ ಸಹಿತ ಜಲ ಕ್ರೀಡೆಗಳು, ಸಾಂಪ್ರದಾಯಿಕ ಕೈರಂಪಣಿ ಮೀನುಗಾರಿಕೆ, ಪುರುಷರ ಬೀಚ್‌ ವಾಲಿಬಾಲ್‌, ಮಹಿಳೆಯರ ಬೀಚ್‌ ತ್ರೋಬಾಲ್‌, ಪುರುಷ ಹಾಗೂ ಮಹಿಳಾ ತಂಡಗಳ ಬೀಚ್‌ ಕಬಡ್ಡಿ ಮತ್ತು ಹಗ್ಗಜಗ್ಗಾಟ, ಮರಳು ಶಿಲ್ಪ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಯಿಂದ ನಡೆಯಲಿವೆ.

ಇದೇ ಸಂದರ್ಭ ಶ್ವಾನ ಪ್ರದರ್ಶನ, ಗಾಳಿಪಟ ಪ್ರದರ್ಶನ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಿಂದ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ನಡೆಯಲಿದೆ. ಮೀನುಗಾರಿಕೆ ಹಾಗೂ ಮೀನು ಸೇವನೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಈ ಮತ್ಸ್ಯಮೇಳದಲ್ಲಿ ಸುಮಾರು 1 ಲಕ್ಷ ಮತ್ಸ್ಯಪ್ರಿಯರು ಭಾಗವಹಿಸುವ ನಿರೀಕ್ಷೆಯಿದೆ.

ಮೀನುಗಾರಿಕಾ ಅಭಿವೃದ್ಧಿಯೊಂದಿಗೆ ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ಫೆಡರೇಶನ್‌ ವತಿಯಿಂದ ಮತ್ಸ್ಯ ಕ್ಯಾಂಟೀನ್‌ ಆರಂಭಿಸಿ, ತಾಜಾ ಮೀನಿನ ಖಾದ್ಯಗಳನ್ನು ಮತ್ಸ್ಯ ಪ್ರಿಯರಿಗೆ ಒದಗಿಸುವ ಯೋಜನೆ ಇದೆ. ಈ ಯೋಜನೆಗೆ ಪೂರ್ವಭಾವಿಯಾಗಿ ಈ ಮತ್ಸ್ಯ ಮೇಳ ಆಯೋಜಿಸಲಾಗಿದೆ ಎಂದರು.

ಸಂಸ್ಥೆಯ ನಿರ್ದೇಶಕರಾದ ಸುರೇಶ್‌ ಸಾಲ್ಯಾನ್‌ ಹಾಗೂ ನಿತೀಶ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

* ಕೇಂದ್ರ, ರಾಜ್ಯ ಸರಕಾರಕ್ಕೆ ಬೇಡಿಕೆ ಪಟ್ಟಿ

ಮೀನುಗಾರರ ಪ್ರಮುಖ ಬೇಡಿಕೆಗಳಾದ 60 ವರ್ಷ ಮೇಲ್ಪಟ್ಟ ಮೀನುಗಾರರಿಗೆ ಪಿಂಚಣಿ, ಶೂನ್ಯ ಬಡ್ಡಿದರ ಸಾಲ, ಮೀನುಗಾರಿಕಾ ದೋಣಿಗಳಿಗೆ ಸೀಮೆಎಣ್ಣೆ ಪ್ರಮಾಣ ಹೆಚ್ಚಳ, ಮೀನುಗಾರರಿಗೆ ವಿತರಿಸುವ ಡೀಸೆಲ್‌ ಮೇಲಿನ ರೋಡ್‌ ಸೆಸ್‌ ರದ್ದು, ಪ್ರತ್ಯೇಕ ಮೀನುಗಾರಿಕಾ ವಲಯ, ಮೀನುಗಾರಿಕಾ ಬಂದರು ಅಭಿವೃದ್ಧಿ, ಕೃಷಿಗೆ ಒದಗಿಸುವ ಸೌಲಭ್ಯಗಳನ್ನು ಮೀನುಗಾರಿಕೆಗೂ ವಿಸ್ತರಿಸುವುದು, ಕೇಂದ್ರದಲ್ಲಿ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ ಮೊದಲಾದ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಸಚಿವರಿಗೆ ಸಲ್ಲಿಸಲಾಗುವುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ