ಆ್ಯಪ್ನಗರ

ಸಿಎಂ ಸಂಪರ್ಕ ಹಿನ್ನೆಲೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕ್ವಾರಂಟೈನ್‌

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಸಿಎಂ ಸಂಪರ್ಕಕ್ಕೆ ಬಂದಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Vijaya Karnataka Web 4 Aug 2020, 3:16 pm
ಉಡುಪಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಂಪರ್ಕಕ್ಕೆ ಬಂದಿರುವ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಯಂಪ್ರೇರಿತರಾಗಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಶಾಸಕ ಸೇರಿದಂತೆ ಇಬ್ಬರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
Vijaya Karnataka Web KOTA Poojary


ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ತಮ್ಮೆಲ್ಲ ಕಾರ್ಯಕ್ರಮ, ಸಾರ್ವಜನಿಕರ ಭೇಟಿ ರದ್ದು ಮಾಡಿದ್ದಾರೆ. ಆ.4ರಂದು ಗಂಟಲಿನ ಸ್ರಾವದ ಮಾದರಿಯನ್ನು ಪರೀಕ್ಷೆಗೆ ನೀಡಲಿದ್ದಾರೆ. ಫಲಿತಾಂಶ ಬರುವ ತನಕವೂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಸಚಿವ ಕೋಟ ಅವರಿಗೆ ಕಳೆದ ನಾಲ್ಕೈದು ದಿನಗಳಿಂದ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್‌ನಲ್ಲಿಇದ್ದೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಿದ್ದರಾಮಯ್ಯಗೂ ಕೊರೊನಾ ದೃಢ, ಮಣಿಪಾಲ್ ಆಸ್ಪತ್ರೆಗೆ ದಾಖಲು!

ಉಡುಪಿ ವಿಧಾನಸಭೆ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್‌ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮೀನು ಮಾರಾಟಗಾರರ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇವರಿಬ್ಬರಿಗೂ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ.

ಮಣಿಪಾಲ್ ಆಸ್ಪತ್ರೆಯ 11 ನೇ ಮಹಡಿಯಲ್ಲಿ ಹಾಲಿ, ಮಾಜಿ ಸಿಎಂಗಳಿಗೆ ಕೋವಿಡ್‌ ಚಿಕಿತ್ಸೆ

ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್‌ ಹಾಗೂ ಯಶ್‌ಪಾಲ್‌ ಎ. ಸುವರ್ಣ ಜು.30ರಂದು ಸಿಎಂ ಬಿಎಸ್‌ವೈ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭ ಆರ್‌. ಅಶೋಕ್‌ ಕೂಡ ಹಾಜರಿದ್ದರು. ಸಿಎಂ ಅವರಿಗೆ ಕೊರೊನಾ ಪಾಸಿಟಿವ್‌ ದೃಢವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕೈಗೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ