ಆ್ಯಪ್ನಗರ

ಸಿಎಎ ವಿರೋಧಿಸಲು ಉಡುಪಿಯಲ್ಲಿ ನಡೀತಿತ್ತು ಬೃಹತ್‌ ತಯಾರಿ: ಪೊಲೀಸರಿಂದ ತಡೆ

ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆಯ ಕಾವು ಜೋರಾಗಿದೆ. ಉಡುಪಿಯಲ್ಲೂ ಶಾಹಿನ್‌ ಬಾಗ್‌ ಮಾದರಿಯ ಪ್ರತಿಭಟನೆಗೆ ತಯಾರಿ ನಡೆಸಲಾಗಿತ್ತು. ಆದರೆ, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಅನುಮತಿ‌ ನಿರಕರಿಸಿದ್ದಾರೆ.

Vijaya Karnataka Web 22 Feb 2020, 2:14 pm
ಉಡುಪಿ: ದೇಶಾದ್ಯಂತ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆಯ ಕಾವು ಜೋರಾಗಿದೆ. ಶಾಹಿನ್‌ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಹೆಚ್ಚು ಸದ್ದು ಮಾಡಿದ ಹಿನ್ನೆಲೆಯಲ್ಲಿ, ಉಡುಪಿಯಲ್ಲೂ ಇದೇ ಮಾದರಿಯ ಪ್ರತಿಭಟನೆಗೆ ತಯಾರಿ ನಡೆಸಲಾಗಿತ್ತು. ಆದರೆ, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಅನುಮತಿ‌ ನಿರಕರಿಸಿದ್ದಾರೆ.
Vijaya Karnataka Web UDUPI protest


ನಗರದ ಹೃದಯ ಭಾಗದ ಅನತಿ ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಫೆ. 22, ಸಂಜೆ 5 ಗಂಟೆಯಿಂದ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆಯಲು ಸಂಘಟಕರು ಪೊಲೀಸರಿಗೆ ಮನವಿ ಮಾಡಿದ್ದರು. ಈ ವೇಳೆ ಕಾನೂನು ಸುವ್ಯವಸ್ಥೆ ಕಾರಣದಿಂದಾಗಿ ಪ್ರತಿಭಟನೆ ಆಯೋಜನೆ ಸಾಧ್ಯವಿಲ್ಲ ಎಂದಿದ್ದಾರೆ‌.

ಪ್ರತಿಭಟನೆಯ ಕುರಿತು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದು, ಶಾಮಿಯಾನ್ ಹಾಕಿ ವ್ಯವಸ್ಥೆ ಮಾಡಲಾಗಿತ್ತು. ಆದರೆ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆಗೆ ನಿರಾಕರಣೆ ಮಾಡಿದ್ದಾರೆ.

ಅಮೂಲ್ಯ ಹಿಂದೆ ದೊಡ್ಡ ತಂಡವಿದೆ, ಇಂಥವರನ್ನು ಬೇರು ಸಮೇತ ಕಿತ್ತು ಹಾಕಲಾಗುವುದು: ಬಸವರಾಜ್‌ ಬೊಮ್ಮಾಯಿ

ಸ್ಥಳಕ್ಕೆ ವೃತ್ತ ನಿರೀಕ್ಷಕ ಮಂಜುನಾಥ ಸಹಿತ ಅನೇಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ‌. ಅಳವಡಿಸಿದ ಶಾಮಿಯಾನ್ ತೆರವುಗೊಳಿಸುವಂತೆ ಸೂಚನೆ ಕೊಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ