ಆ್ಯಪ್ನಗರ

ಅಸ್ವಸ್ಥೆ ಪಿಂಕಿ ರಾಜ್ಯ ಮಹಿಳಾ ನಿಲಯಕ್ಕೆ ದಾಖಲು

ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆ ಉತ್ತರಪ್ರದೇಶÜ ಮಿಡ್ನಾಪುರದ ಪಿಂಕಿ(27) ಅವರನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ, ನಗರದ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಆಸ್ಪತ್ರೆಗೆ ದಾಖಲು ಪಡಿಸಿ ಚಿಕಿತ್ಸೆ ಕೊಡಿಸಿದ್ದು, ಇದೀಗ ನಿಟ್ಟೂರಿನ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಲಾಗಿದೆ.

Vijaya Karnataka Web 28 Jul 2019, 5:00 am
ಉಡುಪಿ: ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆ ಉತ್ತರಪ್ರದೇಶÜ ಮಿಡ್ನಾಪುರದ ಪಿಂಕಿ(27) ಅವರನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ, ನಗರದ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಆಸ್ಪತ್ರೆಗೆ ದಾಖಲು ಪಡಿಸಿ ಚಿಕಿತ್ಸೆ ಕೊಡಿಸಿದ್ದು, ಇದೀಗ ನಿಟ್ಟೂರಿನ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಲಾಗಿದೆ.
Vijaya Karnataka Web piniki


ಜೀವನದಲ್ಲಿ ಮಾನಸಿಕ ಆಘಾತಕ್ಕೆ ಸಿಲುಕಿ ಪಿಂಕಿ ಮಾನಸಿಕವಾಗಿ ಕುಗ್ಗಿರಬಹುದು. ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಂಬಂಧ ಪಟ್ಟ ಇಲಾಖೆಗಳು ನೊಂದ ಮಹಿಳೆಯನ್ನು ಆಕೆಯ ಮನೆಗೆ ಸೇರಿಸುವ ವ್ಯವಸ್ಥೆ ಮಾಡಬೇಕು ಎಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ರೋಗಿಗಳ ವಾರ್ಡಿಲ್ಲ : ಉಡುಪಿಗೆ ಅಪರಿಚಿತ ಮಾನಸಿಕ ರೋಗಿಗಳ ಆಗಮನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅವರು ಈವರೆಗೆ ನೂರಾರು ಮಹಿಳೆ ಹಾಗೂ ಪುರುಷ ಮಾನಸಿಕ ರೋಗಿಗಳನ್ನು ರಕ್ಷಿಸಿ, ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಯಶ್ವಸಿಯಾಗಿದ್ದಾರೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ರೋಗಿಗಳ ಚಿಕಿತ್ಸೆಗೆ ಮೂಲ ಸೌಕರ್ಯ ಇಲ್ಲದಿರುವುದು ಹಾಗೂ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು ಈ ಸಮಸ್ಯೆಗೆ ಸ್ಪಂದಿಸದೆ ಇರುವುದು ಬೇಸರದ ಸಂಗತಿ ಎಂದು ಅವರು ವಿಶಾದ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ