ಆ್ಯಪ್ನಗರ

ಉಡುಪಿಯಲ್ಲಿ ತಮಿಳುನಾಡು ಮೂಲದ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ತಮಿಳುನಾಡು ಮೂಲದ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Vijaya Karnataka 14 Jan 2020, 3:29 pm

ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗಿನ ಜಾವ ತಮಿಳುನಾಡು ಮೂಲದ ಇಬ್ಬರು ಶಂಕಿತ ಉಗ್ರರನ್ನು ರಾಜ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Vijaya Karnataka Web Arrest


ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆದಿದ್ದು, ಸೋಮವಾರವೇ ರೈಲ್ಪೆ ನಿಲ್ದಾಣದಲ್ಲಿ ಪೊಲೀಸರು ಬೇರು ಬಿಟ್ಟಿದ್ದರು. ಪ್ರಯಾಣಿಕರ ಚಲನವಲನಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದ ಪೊಲೀಸರು ಮಂಗಳವಾರ ಬೆಳಗ್ಗಿನ ಜಾವ 6 ಗಂಟೆ ಸುಮಾರಿಗೆ ವ್ಯಕ್ತಿಗಳಿಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ಆರಂಭದಲ್ಲಿ ಇವರು 2014 ರಲ್ಲಿ ನಡೆದ ಪೊಲೀಸ್ ಶೂಟೌಟ್‌ ಪ್ರಕರಣದ ಆರೋಪಿಗಳು ಎನ್ನಲಾಗಿತ್ತು. ಆರೋಪಿಗಳು ಉತ್ತರ ಭಾರತಕ್ಕೆ ತೆರಳಿ ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದರೆಂದು ತಿಳಿದು ಬಂದಿತ್ತು.

ಕೋಲಾರದಲ್ಲಿ ಆಶ್ರಯ ಪಡೆದಿದ್ದ ಶಂಕಿತ ಉಗ್ರ; ಚೆನ್ನೈ ಸಿಸಿಬಿ ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ

ಆದರೆ ಈಗ ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಸೊಲ್ಲಾಪುರದಲ್ಲಿ ಆಯೋಜಿಸಿರುವ ಸಿದ್ದರಾಮೇಶ್ವರ ಜಯಂತಿಗೆ ಆಗಮಿಸಿದ್ದ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಈ ವಿಷಯ ಖಚಿತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ