ಆ್ಯಪ್ನಗರ

ಉಡುಪಿ: ಹೋಂ ಕ್ವಾರಂಟೈನ್‌ ಉಲ್ಲಂಘನೆ, ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲು

ಹೋಂ ಕ್ವಾರಂಟೈನ್‌ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದ ಕಾಪು ತಾಲೂಕಿನ ಕೋವಿಡ್ ಸೋಂಕಿತನ ವಿರುದ್ಧ ಪ್ರಕರಣ ದಾಖಲಾಗಿದೆ. ಈತನಿಗೆ ಕೊರೊನಾ ಸೋಂಕು ದೃಢವಾದ ನಂತರ ಈತನ ಸಂಪರ್ಕಕ್ಕೆ ಬಂದಿದ್ದ ಪ್ರತಿಯೊಬ್ಬರನ್ನೂ ಗುರುತಿಸಿ ಹೋ ಕ್ವಾರಂಟೈನ್‌ ಮಾಡಲಾಗಿದೆ

Vijaya Karnataka Web 6 Apr 2020, 8:23 am
ಉಡುಪಿ: ದುಬೈನಿಂದ ಆಗಮಿಸಿ ಹೋಂ ಕ್ವಾರೆಂಟೈನ್‌ ಉಲ್ಲಂಘಿಸಿ ಓಡಾಡಿದ ಕಾಪು ತಾಲೂಕಿನ ಕೊರೊನಾ ಸೋಂಕಿತನ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡಾ ತಿಳಿಸಿದ್ದಾರೆ.
Vijaya Karnataka Web coronavirus


ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ದಾಖಲಾಗುವವರೆಗೆ ಹಲವು ಬಾರಿ ಹೋಂ ಕ್ವಾರಂಟೈನ್‌ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದ್ದಾನೆ. ಈತನಿಗೆ ಕೊರೊನಾ ಸೋಂಕು ದೃಢವಾದ ನಂತರ ಈತನ ಸಂಪರ್ಕಕ್ಕೆ ಬಂದಿದ್ದ ಪ್ರತಿಯೊಬ್ಬರನ್ನೂ ಗುರುತಿಸಿ ಹೋ ಕ್ವಾರಂಟೈನ್‌ ಮಾಡಲಾಗಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ 14 ದಿನಗಳ ಕ್ವಾರಂಟೈನ್‌ ಮುಕ್ತಾಯಗೊಳಿಸಿದವರನ್ನು ಮತ್ತೆ 14 ದಿನಗಳ ಅಬ್ಸರ್ವೇಶನ್‌ನಲ್ಲಿಇಡಲಾಗುವುದು. ಪ್ರಸ್ತುತ ಕೊರೊನಾ ಸೋಂಕಿತರಾಗಿರುವ ಮೂವರ ಆರೋಗ್ಯ ಉತ್ತಮವಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗ್ಯವಿಲ್ಲಎಂದು ಡಿಎಚ್‌ಒ ತಿಳಿಸಿದರು.

ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವವರು ಹೊರಗೆ ಓಡಾಡುವುದು ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ 9663957222, 9663950222ಗೆ ಮಾಹಿತಿ ನೀಡಬಹುದು. ಸಹಾಯವಾಣಿಗೆ ಇದುವರೆಗೆ 1,136 ಕರೆಗಳು ಬಂದಿವೆ. ಉಡುಪಿ ಜಿಲ್ಲೆಗೆ ಹೊರ ಜಿಲ್ಲೆ, ರಾಜ್ಯದಿಂದ ಬಂದವರ ಮೇಲೂ ಸಹ ಆರೋಗ್ಯ ಇಲಾಖೆ ನಿಗಾ ವಹಿಸಿದೆ ಎಂದರು.

ಜಿಲ್ಲೆಯಲ್ಲಿ ಇದುವರೆಗೆ 1,976 ಶಂಕಿತರನ್ನು ಗುರುತಿಸಿದ್ದು, 172 ಮಂದಿ 28 ದಿನಗಳ ಕ್ವಾರಂಟೈನ್‌ ಮತ್ತು 1,070 ಮಂದಿ 14 ದಿನಗಳ ಕ್ವಾರಂಟೈನ್‌ ಅವಧಿ ಮುಗಿಸಿದ್ದಾರೆ. ಪ್ರಸ್ತುತ 717 ಮಂದಿ ಹೋಂ ಕ್ವಾರಂಟೈನ್‌ ಮತ್ತು 87 ಮಂದಿ ಹಾಸ್ಪಿಟಲ್‌ ಕ್ವಾರಂಟೈನ್‌ನಲ್ಲಿದ್ದಾರೆ. 79 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ