ಆ್ಯಪ್ನಗರ

ರಫೇಲ್‌ ಹಗರಣವಲ್ಲ: ಸಂಸದ ಬಿ.ವೈ.ರಾಘವೇಂದ್ರ

ರಫೇಲ್‌ ಹಗರಣವಲ್ಲ ಅನ್ನುವುದನ್ನು ಸುಪ್ರೀಂ ಕೋರ್ಟ್‌ ತೀರ್ಪು ಸಾಬೀತುಪಡಿಸಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಲವಾಗಿದೆ ಎಂಬುದಕ್ಕೆ ತೀರ್ಪು ಸಾಕ್ಷಿಯಾಗಿದೆ. ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣ ಎಂದು ಬಿಂಬಿಸಿ ಅಪಪ್ರಚಾರದಿಂದ ಪ್ರತಿಪಕ್ಷ ಗಳು ಪಂಚರಾಜ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Vijaya Karnataka 16 Dec 2018, 5:00 am
ಕುಂದಾಪುರ: ರಫೇಲ್‌ ಹಗರಣವಲ್ಲ ಅನ್ನುವುದನ್ನು ಸುಪ್ರೀಂ ಕೋರ್ಟ್‌ ತೀರ್ಪು ಸಾಬೀತುಪಡಿಸಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಲವಾಗಿದೆ ಎಂಬುದಕ್ಕೆ ತೀರ್ಪು ಸಾಕ್ಷಿಯಾಗಿದೆ. ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣ ಎಂದು ಬಿಂಬಿಸಿ ಅಪಪ್ರಚಾರದಿಂದ ಪ್ರತಿಪಕ್ಷ ಗಳು ಪಂಚರಾಜ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
Vijaya Karnataka Web rafael is not a scam mp by raghavendra
ರಫೇಲ್‌ ಹಗರಣವಲ್ಲ: ಸಂಸದ ಬಿ.ವೈ.ರಾಘವೇಂದ್ರ


ಕುಂದಾಪುರಕ್ಕೆ ಶನಿವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದ ರಕ್ಷ ಣೆಗೆ ಬೇಕಾದ ಯುದ್ಧ ವಿಮಾನ ಖರೀದಿ ನಡೆದಿದೆಯೇ ಹೊರತು ಇದರಲ್ಲಿ ಯಾವುದೇ ಹಗರಣ ನಡೆದಿಲ್ಲ. ಪ್ರಪಂಚವೇ ಗೌರವಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಿರಂತರ ಅಪಪ್ರಚಾರ ಮಾಡುತ್ತಿರುವ ಪ್ರತಿಪಕ್ಷ ಗಳಿಗೆ 2019ರ ಲೋಕಸಭೆ ಚುನಾವಣೆಯಲ್ಲಿ ಮಗದೊಮ್ಮೆ ತಕ್ಕ ಉತ್ತರ ಸಿಗಲಿದೆ ಎಂದು ಭವಿಷ್ಯ ನುಡಿದರು.

ಮೋದಿ ಜನಪ್ರಿಯತೆ ಕುಗ್ಗದು: ಪಂಚರಾಜ್ಯಗಳಲ್ಲಿನ ಚುನಾವಣೆ ಫಲಿತಾಂಶದಿಂದ ಮೋದಿಯವರ ಜನಪ್ರಿಯತೆ ಕುಗ್ಗದು. ಅವರು ದೇಶಕ್ಕೆ ನೀಡುತ್ತಿರುವ ಉತ್ತಮ ಕೊಡುಗೆಗಳ ಬಗ್ಗೆ ವಿಶ್ವವೇ ಮೆಚ್ಚುಗೆ ಸೂಚಿಸಿದೆ. ಮೋದಿಯವರ ಕೈಬಲಪಡಿಸುವ ಕೆಲಸ ಆಗಬೇಕು ಎಂದು ಅಭಿಪ್ರಾಯಪಟ್ಟರು.

ಗಡ್ಕರಿ ಸ್ಪಂದನೆ: ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬಂದರು ಮತ್ತು ರಸ್ತೆ ಅಭಿವೃದ್ಧಿ ಕುರಿತಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಚತುಷ್ಪಥ ಕಾಮಗಾರಿಯಲ್ಲಿನ ಹಿನ್ನಡೆಗೆ ಹಿಂದಿನ ಯುಪಿಎ ಸರಕಾರ ಕಾರಣ. ಎನ್‌ಡಿಎ ಸರಕಾರ ಹೆದ್ದಾರಿ ಕಾಮಗಾರಿಗಳಲ್ಲಿನ ಲೋಪ ಸರಿಪಡಿಸಿ ವೇಗ ಹೆಚ್ಚಿಸಲು ಕ್ರಮ ತೆಗೆದುಕೊಂಡಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ