ಆ್ಯಪ್ನಗರ

ಕಾಪು ಬ್ಲಾಕ್‌ ಕಾಂಗ್ರೆಸ್‌ ಗಣರಾಜ್ಯೋತ್ಸವ ಆಚರಣೆ

ಡಾ.ಭೀಮರಾವ್‌ ಅಂಬೇಡ್ಕರ್‌ ದೇಶಕ್ಕೆ ಕೊಟ್ಟಂಥ ಸಂವಿಧಾನದಿಂದಾಗಿ ಭಾರತವು ಇಂದು ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷ ಣಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ರಾಷ್ಟ್ರವಾಗಿ ಅಭಿವೃದ್ಧಿ ಹೊಂದಲು ಕಾರಣವಾಗಿದೆ. ಈ ಸಂವಿಧಾನದ ಆಶಯ ಮತ್ತು ಉದ್ದೇಶಗಳನ್ನು ರಕ್ಷಿಸುವಂಥ ಮಹತ್ತರವಾದ ಜವಾಬ್ದಾರಿ ಭಾರತೀಯರಾದ ನಮ್ಮೆಲ್ಲರ ಮೇಲಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದಾಗ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ರಕ್ಷ ಣೆಗಾಗಿ ನಾವೆಲ್ಲರೂ ಕಟಿಬದ್ಧರಾಗೋಣ ಎಂದು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದರು.

Vijaya Karnataka 27 Jan 2019, 5:00 am
ಕಟಪಾಡಿ: ಡಾ.ಭೀಮರಾವ್‌ ಅಂಬೇಡ್ಕರ್‌ ದೇಶಕ್ಕೆ ಕೊಟ್ಟಂಥ ಸಂವಿಧಾನದಿಂದಾಗಿ ಭಾರತವು ಇಂದು ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷ ಣಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ರಾಷ್ಟ್ರವಾಗಿ ಅಭಿವೃದ್ಧಿ ಹೊಂದಲು ಕಾರಣವಾಗಿದೆ. ಈ ಸಂವಿಧಾನದ ಆಶಯ ಮತ್ತು ಉದ್ದೇಶಗಳನ್ನು ರಕ್ಷಿಸುವಂಥ ಮಹತ್ತರವಾದ ಜವಾಬ್ದಾರಿ ಭಾರತೀಯರಾದ ನಮ್ಮೆಲ್ಲರ ಮೇಲಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದಾಗ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ರಕ್ಷ ಣೆಗಾಗಿ ನಾವೆಲ್ಲರೂ ಕಟಿಬದ್ಧರಾಗೋಣ ಎಂದು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದರು.
Vijaya Karnataka Web 107


ಅವರು ಶನಿವಾರ ಕಾಪು ಬ್ಲಾಕ್‌ ಕಾಂಗ್ರೆಸ್‌(ದ) ವತಿಯಿಂದ ಕಾಪು ಕಾಂಗ್ರೆಸ್‌ ಕಚೇರಿ ರಾಜೀವ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ಕಾರ್ಯಕರ್ತರಿಗೆ ಗಣರಾಜ್ಯೋತ್ಸವದ ಶುಭಾಶಯ ಸಲ್ಲಿಸಿ ಮಾತನಾಡಿದರು.

ಹಿರಿಯ ಕಾಂಗ್ರೆಸ್‌ ಮುಖಂಡರಾದ ಗೋಪಾಲ್‌ ಪೂಜಾರಿ, ಫಲಿಮಾರು ಧ್ವಜಾರೋಹಣ ಮಾಡಿದರು.

ಕಾರ್ಯಕ್ರಮದಲ್ಲಿ ಕಾಪು ನಗರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಸಾದಿಕ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪ್ರಭಾವತಿ ಸಾಲ್ಯಾನ್‌, ದೀಪಕ್‌ ಕುಮಾರ್‌ ಎರ್ಮಾಳ್‌, ಪುರಸಭಾ ಸದಸ್ಯ ಸೌಮ್ಯಾ ಸಂಜೀವ, ಅಬ್ದುಲ್‌ ಹಮೀದ್‌, ವಿಜಯಲಕ್ಷ್ಮಿ, ಅಶ್ವಿನಿ, ಸುರೇಶ್‌ ದೇವಾಡಿಗ, ಲಕ್ಷ್ಮೀಶ ತಂತ್ರಿ, ನಾಗೇಶ್‌ ಸುವರ್ಣ, ಮುಖಂಡರಾದ ಮನಹರ್‌ ಇಬ್ರಾಹಿಂ, ಸುಧೀರ್‌ ಕರ್ಕೇರ, ಮಾಧವ್‌ ಪಾಲನ್‌, ಆಸಿಫ್‌, ಹರೀಶ್‌ ನಾಯಕ್‌, ಸತೀಶ್‌ ದೇಜಾಡಿ, ಗಣೇಶ್‌ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಬ್ಲಾಕ್‌ ಅಧ್ಯಕ್ಷ ನವೀನಚಂದ್ರ ಸುವರ್ಣ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಮೀರ್‌ ಮೊಹಮ್ಮದ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ