ಆ್ಯಪ್ನಗರ

ಮೀನುಗಾರರ ನಿಯೋಗದಿಂದ ಜೇಟ್ಲಿಗೆ ಮನವಿ

ಮೀನುಗಾರರ ವಿವಿಧ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಮೀನುಗಾರರ ವೇದಿಕೆಯ ಪದಾಧಿಕಾರಿಗಳು ನಿಯೋಗದೊಂದಿಗೆ ದೆಹಲಿಗೆ ತೆರಳಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರನ್ನು ಭೇಟಿ ಮಾಡಿ ಮಂಗಳವಾರ ಮನವಿ ಸಲ್ಲಿಸಿದೆ.

Vijaya Karnataka 9 Jan 2019, 5:00 am
ಉಡುಪಿ: ಮೀನುಗಾರರ ವಿವಿಧ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಮೀನುಗಾರರ ವೇದಿಕೆಯ ಪದಾಧಿಕಾರಿಗಳು ನಿಯೋಗದೊಂದಿಗೆ ದೆಹಲಿಗೆ ತೆರಳಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರನ್ನು ಭೇಟಿ ಮಾಡಿ ಮಂಗಳವಾರ ಮನವಿ ಸಲ್ಲಿಸಿದೆ.
Vijaya Karnataka Web 8


ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಆಧುನಿಕ ತಂತ್ರಜ್ಞಾನ ಬಳಕೆ ಸೇರಿದಂತೆ ಡಿಸೇಲ್‌ ತೆರಿಗೆ ವಿನಾಯಿತಿ, ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ, ಜಿಎಸ್‌ಟಿ ಮುಕ್ತ ಮೀನುಗಾರಿಕೆ, ರಿಯಾಯಿತಿ ದರದಲ್ಲಿ ನಾಡದೋಣಿಗೆ ಸೀಮೆಎಣ್ಣೆ ವಿತರಣೆ ಸಹಿತ ಪ್ರಮುಖ 5 ಬೇಡಿಕೆಯನ್ನು ಮನವಿ ಮೂಲಕ ಸಲ್ಲಿಸಿ ಸಚಿವರನ್ನು ಒತ್ತಾಯಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ತೆರಳಿದ್ದ ನಿಯೋಗಕ್ಕೆ ನಾರ್ವೆ ಪ್ರಧಾನಿಯ ಆಗಮನದ ಹಿನ್ನೆಲೆಯಲ್ಲಿ ನಿಗದಿಯಂತೆ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಧಾನಿ ಕಾರ್ಯದರ್ಶಿಗಳಿಗೆ ಮನವಿ ನೀಡಲಾಗಿದೆ. ಅಲ್ಲದೇ ಅಧಿವೇಶನದ ಹಿನ್ನೆಲೆಯಲ್ಲಿ ಇತರೆ ಸಚಿವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ನಿಯೋಗದಲ್ಲಿದ್ದ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ.

ಈ ಸಂದರ್ಭ ಅಖಿಲ ಭಾರತ ಮೀನುಗಾರ ವೇದಿಕೆ ಅಧ್ಯಕ್ಷ ವೆಲ್ಜಿಭಾಯಿ ಮಸಾನಿ, ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ. ಸುವರ್ಣ, ಮುಖಂಡ ನಿತಿನ್‌ ಬೋಳೂರು, ಸಂಸದರಾದ ನಳಿನ್‌ ಕುಮಾರ್‌ ಕಟೀಲ್‌, ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ