ಆ್ಯಪ್ನಗರ

ಉಡುಪಿ ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿ ಭದ್ರತೆ ಒದಗಿಸಿದ ರಾಜ್ಯ ಸರ್ಕಾರ

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತರಾದ ಶ್ರೀಗಳು, ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ ರಾಜ್ಯ ಸರ್ಕಾರ ಉಡುಪಿ ಶ್ರೀಗಳಿಗೆ ವೈ ಶ್ರೇಣಿ ಭದ್ರತೆ ಕಲ್ಪಿಸಿದೆ.

Vijaya Karnataka Web 1 Jan 2021, 12:46 pm
ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.
Vijaya Karnataka Web pejavara swami


ಗುರುವಾರದಿಂದಲೇ ಜಾರಿಗೆ ಬರುವಂತೆ ವೈ ಶ್ರೇಣಿ ಭದ್ರತೆಯನ್ನು ಒದಗಿಸಲಾಗಿದ್ದು, ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತರಾದ ಶ್ರೀಗಳು, ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಉಡುಪಿ: ರಸ್ತೆಯಲ್ಲಿ ‘ನ್ಯೂ ಇಯರ್‌’ ಬರೆಯುವಾಗ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!

ಉಡುಪಿ ಶಾಸಕ ಕೆ. ರಘುಪತಿ ಭಟ್‌ರ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಕೆ.ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠವು ಕೃತಜ್ಞತೆ ಸಲ್ಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ