ಆ್ಯಪ್ನಗರ

ಉಡುಪಿಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯಗೊಂಡಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹಲವಾರು ನಾಯಕರು, ಸ್ವಾಮೀಜಿಗಳು ಉಡುಪಿಗೆ ಆಗಮಿಸಿ ಶ್ರೀಗಳ ಆರೋಗ್ಯ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

Vijaya Karnataka Web 26 Dec 2019, 8:54 pm
Vijaya Karnataka Web ಪೇಜಾವರ ಶ್ರೀ
ಪೇಜಾವರ ಶ್ರೀ
ಉಡುಪಿ: ಪೇಜಾವರ ಶ್ರೀಗಳು ಚಿಕಿತ್ಸೆಗಾಗಿ ಡಿ.20ರಂದು ದಾಖಲಾದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಗುರುವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಪೇಜಾವರ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವಯಸ್ಸಿನ ಕಾರಣದಿಂದ ಚೇತರಿಕೆಯಲ್ಲಿವಿಳಂಬವಾಗುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯ ಸುಧಾರಣೆಗಾಗಿ ಸುತ್ತೂರು ಶ್ರೀಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ಮಾಹೆ ಸಹ ಕುಲಾಧಿಪತಿ ಡಾ. ಎಚ್‌.ಎಸ್‌. ಬಲ್ಲಾಳ್‌, ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ. ಸುಧಾ ವಿದ್ಯಾಸಾಗರ್‌, ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ