ಆ್ಯಪ್ನಗರ

ಉಡುಪಿ: ಸರಕಾರಿ ಕಚೇರಿಗಳಲ್ಲಿ ಪ್ರತಿ ಸೋಮವಾರ ಎಸಿ ಬಂದ್‌

ಪರಿಸರ ರಕ್ಷ ಣೆ ಹಾಗೂ ಜಾಗತಿಕ ಪರಿಸರ ತಾಪಮಾನ ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲ ಸರಕಾರಿ ಕಚೇರಿಗಳ ಎಸಿಗಳನ್ನು ಆಫ್‌ ಮಾಡಿ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

Vijaya Karnataka 7 Jun 2019, 5:00 am
ಉಡುಪಿ: ಪರಿಸರ ರಕ್ಷ ಣೆ ಹಾಗೂ ಜಾಗತಿಕ ಪರಿಸರ ತಾಪಮಾನ ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲ ಸರಕಾರಿ ಕಚೇರಿಗಳ ಎಸಿಗಳನ್ನು ಆಫ್‌ ಮಾಡಿ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
Vijaya Karnataka Web 3


ಸಮೂಹ ಸಾರಿಗೆಯಲ್ಲಿ ಗುರುವಾರ ತಮ್ಮ ಕಚೇರಿಗೆ ತೆರಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿಶ್ವ ಪರಿಸರ ದಿನದ ಅಂಗವಾಗಿ, ಈ ವರ್ಷದ ಘೋಷವಾಕ್ಯ 'ವಾಯುಮಾಲಿನ್ಯ ನಿಯಂತ್ರಣ' ಕುರಿತಾಗಿದ್ದು, ಇದನ್ನು ಉಡುಪಿ ಜಿಲ್ಲೆಯಲ್ಲಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಎಲ್ಲ ಅಧಿಕಾರಿಗಳು ಒಮ್ಮತ ಸೂಚಿಸಿದ್ದಾರೆ. ಇದರಿಂದ ವಿದ್ಯುತ್‌ ಉಳಿತಾಯದ ಜತೆಗೆ, ಪರಿಸರದಲ್ಲಿ ಜಾಗತಿಕ ತಾಪಮಾನ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಸಾಧ್ಯವಾದ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪರಿಸರ ಸಂರಕ್ಷ ಣೆ ಉದ್ದೇಶದಿಂದ ಈಗಾಗಲೇ ಪ್ರತಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಸಮೂಹ ಸಾರಿಗೆ(ಸರಕಾರಿ ಇಲಾಖಾ ಬಸ್‌)ಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪ್ರಯಾಣಿಸುವುದರ ಮೂಲಕ ಗಮನ ಸೆಳೆದಿರುವ ಉಡುಪಿ ಜಿಲ್ಲಾಧಿಕಾರಿಗಳು, ಇದೀಗ ತಮ್ಮ ಹೊಸ ನಿರ್ಧಾರದಿಂದ ಜಿಲ್ಲೆಯ ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು, ಕಾರ್ಪೋರೇಟ್‌ ಸಂಸ್ಥೆಗಳು ಇದನ್ನು ಮಾದರಿಯಾಗಿ ಸ್ವೀಕರಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆ ನೀಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ