ಆ್ಯಪ್ನಗರ

ಯಕ್ಷಗಾನದಿಂದ ಸಂಸ್ಕೃತಿ, ಧರ್ಮದ ಪ್ರಾಮುಖ್ಯತೆ ಕಲಿಸಲು ಸಾಧ್ಯ

ಹಳೆಯ ಸಂಸ್ಕೃತಿ, ಸಂಪ್ರದಾಯ ಹಾಗೂ ಧರ್ಮದ ಪ್ರಾಮುಖ್ಯತೆಯನ್ನು ಕಲಿಸುವ ಯಕ್ಷಗಾನಕ್ಕೆ ಶಿವರಾಮ ಕಾರಂತರು ಕೊಟ್ಟ ಸ್ಪರ್ಶದಿಂದಾಗಿ ಪ್ರಸಿದ್ಧಿ ಪಡೆದುಕೊಂಡಿದ್ದು, ನಾನಾ ಪ್ರಯೋಗ, ಆಧುನಿಕ ತಂತ್ರ ಬಳಕೆಯಾಗುತ್ತಿದೆ. ಪ್ರಸ್ತುತ ಈ ಕಲೆ ಬೇರೆ ಬೇರೆ ಕಡೆಗಳಲ್ಲಿ ಹೊಸ ಹೊಸ ರೂಪಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ಹೈಕೋರ್ಟ್‌ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಬಿ.ಎ.ಪಾಟೀಲ್‌ ತಿಳಿಸಿದ್ದಾರೆ.

Vijaya Karnataka 21 May 2019, 5:00 am
ಉಡುಪಿ: ಹಳೆಯ ಸಂಸ್ಕೃತಿ, ಸಂಪ್ರದಾಯ ಹಾಗೂ ಧರ್ಮದ ಪ್ರಾಮುಖ್ಯತೆಯನ್ನು ಕಲಿಸುವ ಯಕ್ಷಗಾನಕ್ಕೆ ಶಿವರಾಮ ಕಾರಂತರು ಕೊಟ್ಟ ಸ್ಪರ್ಶದಿಂದಾಗಿ ಪ್ರಸಿದ್ಧಿ ಪಡೆದುಕೊಂಡಿದ್ದು, ನಾನಾ ಪ್ರಯೋಗ, ಆಧುನಿಕ ತಂತ್ರ ಬಳಕೆಯಾಗುತ್ತಿದೆ. ಪ್ರಸ್ತುತ ಈ ಕಲೆ ಬೇರೆ ಬೇರೆ ಕಡೆಗಳಲ್ಲಿ ಹೊಸ ಹೊಸ ರೂಪಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ಹೈಕೋರ್ಟ್‌ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಬಿ.ಎ.ಪಾಟೀಲ್‌ ತಿಳಿಸಿದ್ದಾರೆ.
Vijaya Karnataka Web yaksha


ಉಡುಪಿ ವಕೀಲರ ಸಂಘದ ವತಿಯಿಂದ ಎರಡು ದಿನಗಳ ಕಾಲ ಅಜ್ಜರಕಾಡು ಪುರಭವನದಲ್ಲಿ ಆರಂಭಗೊಂಡ ರಾಜ್ಯಮಟ್ಟದ ವಕೀಲರ ಯಕ್ಷಗಾನ ಸ್ಪರ್ಧೆ 'ಯಕ್ಷ ಕಲಾ ವೈಭವ-2019'ನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಬಣ್ಣ, ವೇಷ ಭೂಷಣ, ನೃತ್ಯ, ಮಾತುಗಾರಿಕೆ, ಹಾಡುಗಾರಿಕೆ ಅದ್ಭುತವಾಗಿದೆ. ಇದು ಪುರಾತನ ಕಲೆ ಎನ್ನುವುದಕ್ಕೆ ಸಾಕಷ್ಟು ಪುರಾವೆಗಳಿವೆ. ಯಕ್ಷಗಾನದಿಂದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಉಡುಪಿ ಪ್ರಧಾನ ಮತ್ತು ಜಿಲ್ಲಾ ನ್ಯಾಯಾಧೀಶ ಸಿ.ಎಂ. ಜೋಶಿ ಮಾತನಾಡಿ, ನಮ್ಮ ಸಂಸ್ಕೃತಿಯತ್ತ ಗಮನ ಹರಿಸಿದರೆ ವೃತ್ತಿ ಬದುಕಿನಲ್ಲಿ ಸಾಧನೆ ಮಾಡಬಹುದಾಗಿದೆ. ಇದಕ್ಕೆ ವಕೀಲರು ತಮ್ಮ ದಾರಿ ಹಾಗೂ ಇತಿಹಾಸವನ್ನು ನೆನಪಿಸುವ ಕಾರ್ಯವನ್ನು ಯಕ್ಷಗಾನದ ಮೂಲಕ ಮಾಡಿದ್ದಾರೆ. ಪುರಾಣದಲ್ಲಿರುವ ಕೆಲ ಒಲವುಗಳನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಆಗ ವೃತ್ತಿಯಲ್ಲಿ ಹೆಚ್ಚು ಹೊಳಪು ಹಾಗೂ ಮೊನಚು ಪಡೆಯಲು ಸಾಧ್ಯವಿದೆ ಎಂದರು.

ಸಂಘದ ಅಧ್ಯಕ್ಷ ಎಚ್‌. ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಶ್ರೀಪತಿ ಆಚಾರ್ಯ ಉಪಸ್ಥಿತರಿದ್ದರು. ಯಕ್ಷ ಕಲಾ ವೈಭವದ ಅಧ್ಯಕ್ಷ ವಿಜಯ ಹೆಗ್ಡೆ ಸ್ವಾಗತಿಸಿದರು. ಮುಂಡ್ಕೂರು ವಿನಯ ಆಚಾರ್ಯ ಕಾರ‍್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ