ಆ್ಯಪ್ನಗರ

ಬೋಟ್‌ ಪತ್ತೆಗೆ ಎಲ್ಲ ರೀತಿಯ ಕ್ರಮ:ಎಂ.ಬಿ.ಪಾಟೀಲ

ಯಲ್ಲಾಪುರ : ಮಲ್ಪೆಯ ಬಂದರಿನಿಂದ ಸುವರ್ಣ ತ್ರಿಭುಜ ಹೆಸರಿನ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಬೋಟ್‌ ಹಾಗೂ ಮೀನುಗಾರರ ಪತ್ತೆಗಾಗಿ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

Vijaya Karnataka 6 Jan 2019, 5:00 am
ಯಲ್ಲಾಪುರ : ಮಲ್ಪೆಯ ಬಂದರಿನಿಂದ ಸುವರ್ಣ ತ್ರಿಭುಜ ಹೆಸರಿನ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಬೋಟ್‌ ಹಾಗೂ ಮೀನುಗಾರರ ಪತ್ತೆಗಾಗಿ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.
Vijaya Karnataka Web KWR-5 YLP 3  A


ಉಡುಪಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಗೃಹ ಸಚಿವ ಎಂ.ಬಿ.ಪಾಟೀಲ್‌ ಯಲ್ಲಾಪುರ ಪಟ್ಟಣಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಾಣೆಯಾದ ಮೀನುಗಾರರ ಪತ್ತೆಗಾಗಿ ವಾಣಿಜ್ಯ ಹಡಗುಗಳ ಹಾಗೂ ನೆರೆಯ ರಾಜ್ಯಗಳ ಸಹಕಾರವನ್ನೂ ಪಡೆಯಲಾಗುತ್ತಿದೆ. ಮೀನುಗಾರರನ್ನು ಹುಡುಕಲು ಕರಾವಳಿ ಮೀಸಲು ಪಡೆ, ಪೊಲೀಸರು ಹಾಗೂ ಕೇಂದ್ರದ ನೆರವಿನೊಂದಿಗೆ ವಾಯುಸೇನೆ, ನೌಕಾಸೇನೆ ಕಾರ್ಯ ನಿರ್ವಹಿಸುತ್ತಿದೆ. ಬೋಟ್‌ ಕುರಿತು ನಿಗಾ ಇಡಲು ಪೊಲೀಸ್‌ ಹಿರಿಯ ಅಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ. ಕಾಣೆಯಾದ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರಕಾರದಿಂದ ಗಂಭೀರ ಪ್ರಯತ್ನ ನಡೆಸಲಾಗಿದೆ ಎಂದರು.

ಕಣ್ಮರೆಯಾದ ಮೀನುಗಾರರ ಪತ್ತೆಗೆ ರಾಜ್ಯ ಸರಕಾರ ನಿರ್ಲಕ್ಷ ್ಯ ತೋರಿದೆ ಎಂಬ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಷಯದಲ್ಲಿ ಯಾರೂ ರಾಜಕೀಯ ಬೆರೆಸಬಾರದು. ಸಹಕಾರ ನೀಡುವ ಬದಲು ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರ ಸಚಿವರಾದ ಅವರೂ ಕೇಂದ್ರದಿಂದ ಅಗತ್ಯ ನೆರವು ನೀಡುವ ಬಗ್ಗೆ ಪ್ರಯತ್ನಿಸಲಿ ಎಂದರು.

ಬೆಳಗಿನ ಉಪಹಾರ ಸೇವನೆ : ಉಡುಪಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಗೃಹ ಸಚಿವ ಎಂ.ಬಿ.ಪಾಟೀಲ್‌ ಯಲ್ಲಾಪುರ ಪಟ್ಟಣಕ್ಕೆ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ಗೃಹ ಸಚಿವರಾಗಿ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಎಂ.ಬಿ. ಪಾಟೀಲ್‌ ಅವರನ್ನು ಶಾಸಕ ಶಿವರಾಮ ಹೆಬ್ಬಾರ್‌ ಆತ್ಮೀಯವಾಗಿ ಸ್ವಾಗತಿಸಿದರು. ಸಚಿವರಿಗೆ ಶಾಲು ಹೊದೆಸಿ ಗೌರವಿಸಿದರು. ತಾಲೂಕಿನಲ್ಲಿ ಬೆಳೆಯಲಾದ ಅಡಕೆ, ಎಲೆ, ಶುದ್ಧ ಜೇನುತುಪ್ಪ, ಮಾವಿನ ಮಿಡಿ ಉಪ್ಪಿನಕಾಯಿಗಳನ್ನು ಸಚಿವರಿಗೆ ನೀಡಿದರು.

ಈ ಸಂದರ್ಭದಲ್ಲಿ ಶಿರಾ, ಉಪ್ಪಿಟ್ಟು, ಬನ್ಸ್‌, ಒಳಗೊಂಡ ಉಪಹಾರ ಸೇವಿಸಿದ ಸಚಿವರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಚುಟುಕಾಗಿ ಮಾಹಿತಿ ಪಡೆದರು. ಈ ಹಿಂದೆ ತಾವು ಜಲಸಂಪನ್ಮೂಲ ಸಚಿವರಾಗಿದ್ದಾಗ ಯಲ್ಲಾಪುರ ಕ್ಷೇತ್ರದ ಮುಂಡಗೋಡ ತಾಲೂಕಿನ 29 ಕೆರಗಳಿಗೆ ನೀರು ತುಂಬಿಸುವ ಯೋಜನೆಗಾಗಿ ಹಣ ಮಂಜೂರಿ ಮಾಡಿದ್ದನ್ನು ನೆನಪಿಸಿಕೊಂಡರು. ಗೃಹ ಸಚಿವರ ಆಗಮನದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ತಹಸೀಲ್ದಾರ್‌ ಡಿ.ಜಿ.ಹೆಗಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ತಾ.ಪಂ.ಅಧ್ಯಕ್ಷೆ ಭವ್ಯಾ ಶೆಟ್ಟಿ, ಸ್ಥಳೀಯ ನಾಯಕರು, ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್‌, ಸಿಪಿಐ ಡಾ.ಮಂಜುನಾಥ ನಾಯಕ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ