ಆ್ಯಪ್ನಗರ

ಅಮಿತ್‌ ಶಾ, ಬಿಎಸ್‌ವೈ ಶೀಘ್ರ ಗುಣಮುಖರಾಗಲಿ

ಕಾರವಾರ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಬ್ಬರೂ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್‌.ನಾಯ್ಕ ತಿಳಿಸಿದ್ದಾರೆ.

Vijaya Karnataka 4 Aug 2020, 5:00 am
ಕಾರವಾರ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಬ್ಬರೂ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್‌.ನಾಯ್ಕ ತಿಳಿಸಿದ್ದಾರೆ.
Vijaya Karnataka Web roopali naik


ರಾಜ್ಯದಲ್ಲಿಕೊರೋನಾ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತ, ಕೊರೋನಾ ವಾರಿಯರ್ಸ್‌ ಅನ್ನು ಹುರಿದುಂಬಿಸುತ್ತ, ನಮ್ಮ ರಾಜ್ಯದ 6 ಕೋಟಿಗೂ ಹೆಚ್ಚು ಜನರ ಆರೋಗ್ಯಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರು ಹಗಲು ರಾತ್ರಿ ದುಡಿಯುತ್ತಿದ್ದಾರೆ. ಸ್ವತಃ ತಾವು ಚಿಕಿತ್ಸೆ ಪಡೆಯುತ್ತಿರುವಾಗಲೂ ಜನತೆಯ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿದ್ದಾರೆ. ಅಮಿತ್‌ ಶಾ ಅವರೂ ಕೂಡ ರಾಷ್ಟ್ರದ ಭದ್ರತೆಗಾಗಿ, ಸುಗಮ ಜನಜೀವನಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ.

ಇವರಿಬ್ಬರೂ ಆರೋಗ್ಯದಿಂದ ಇದ್ದು, ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಜನತೆ, ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳ ಪರವಾಗಿ ದೇವರಲ್ಲಿಪ್ರಾರ್ಥಿಸುವುದಾಗಿ ಶಾಸಕಿ ರೂಪಾಲಿ ಎಸ್‌.ನಾಯ್ಕ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ