ಆ್ಯಪ್ನಗರ

25 ವರ್ಷವಾದರೂ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ: ಯಡಿಯೂರಪ್ಪ

ಪಕ್ಷ ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬನ್ನಿ. ಮತ್ತೊಮ್ಮೆ ಬೇಕಾದರೂ ಜಿಲ್ಲೆಗೆ ಬರಲು ಸಿದ್ಧನಿದ್ದೇನೆ. ಆದರೆ ಕ್ಷೇತ್ರವನ್ನು ಈ ಬಾರಿ ಗೆಲ್ಲಿಸಲೇಬೇಕು ಎಂದು ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

Vijaya Karnataka Web 18 Nov 2021, 4:06 pm
ಯಲ್ಲಾಪುರ (ಉತ್ತರ ಕನ್ನಡ): ಇನ್ನೂ 25 ವರ್ಷವಾದರೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಇನ್ನುಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಕನ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
Vijaya Karnataka Web ಜನಸ್ವರಾಜ್‌ ಸಮಾವೇಶ
ಜನಸ್ವರಾಜ್‌ ಸಮಾವೇಶ


ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮುಂಡಗೋಡ ರಸ್ತೆಯಲ್ಲಿರುವ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಬಿಜೆಪಿಯ ಜನಸ್ವರಾಜ್ ಸಮಾವೇಶದಲ್ಲಿ ಯಡಿಯೂರಪ್ಪ ಮಾತನಾಡಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅದರಲ್ಲಿ ಕಾಲಿಡಲು ಯಾರೂ ಮುಂದೆ ಬರಲ್ಲ. ರಾಹುಲ್ ಗಾಂಧಿಗೆ ಎಲ್ಲಿಯೂ ಜನಮನ್ನಣೆ ಸಿಗುತ್ತಿಲ್ಲ. ಅವರು ಪದೇಪದೆ ವಿದೇಶಕ್ಕೆ ಯಾಕೆ ಹೋಗಿ ಬರ್ತಾರೋ ನಮಗೆ ಗೊತ್ತಿಲ್ಲ. ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂದು ಇದರಿಂದ ಗೊತ್ತಾಗುತ್ತಿದೆ ಎಂದು ಬಿಎಸ್‌ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ಕಾಲೆಳೆದರು.

ಉತ್ತರ ಕನ್ನಡದಲ್ಲಿ ಕಸ ಸಂಗ್ರಹಣೆ ವಾಹನಗಳಿಗೆ ಮಹಿಳೆಯರೇ ಡ್ರೈವರ್!

ಈ ಹಿಂದೆ ಗೆಲ್ಲಲು ಸಾಧ್ಯವಾಗದ ಕ್ಷೇತ್ರದಿಂದಲೇ ಪ್ರವಾಸ ಪ್ರಾರಂಭವಾಗಿದೆ. ನೀವೇ ಅಭ್ಯರ್ಥಿ ಎನ್ನುವಂತೆ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು‌. ಪಕ್ಷ ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬನ್ನಿ. ಮತ್ತೊಮ್ಮೆ ಬೇಕಾದರೂ ಜಿಲ್ಲೆಗೆ ಬರಲು ಸಿದ್ಧನಿದ್ದೇನೆ. ಆದರೆ ಕ್ಷೇತ್ರವನ್ನು ಈ ಬಾರಿ ಗೆಲ್ಲಿಸಲೇಬೇಕು ಎಂದು ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ದೇಶದ ಇತಿಹಾಸದಲ್ಲಿ ನರೇಂದ್ರ ಮೋದಿಯವರಂಥ ಪ್ರಧಾನಿ ಸಿಕ್ಕಿರುವುದು ನಮ್ಮ ಸೌಭಾಗ್ಯ. ಅಟಲ್‌ ಬಿಹಾರ್ ವಾಜಪೇಯಿ ನಂತರ ದೇಶದಲ್ಲಿ ಅಮೂಲಾಗ್ರ ಬದಲಾವಣೆ ತರಲು ಮೋದಿ ಬಂದಿದ್ದಾರೆ ಎಂದು ಮಾಜಿ ಸಿಎಂ ಹೇಳಿದರು.

ವಿಧಾನ ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಗೊಂದಲದ ನಡುವೆ ವಿದೇಶದಲ್ಲಿ ಕುಳಿತ ದೇಶಪಾಂಡೆ!

ಗ್ರಾಮ ಪಂಚಾಯತಿ ಸದಸ್ಯರು ಕೂಡ ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವ ಈ ಕಾಲಘಟ್ಟದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ಈ ವೇಳೆ ನಾನು ಕಣ್ಣೀರು ಹಾಕಿದ್ದಕ್ಕೆ ಹಲವರು ಟೀಕೆ ಮಾಡಿದರು. ನನ್ನ ಶಿಕಾರಿಪುರ ಜನ ಹಾಗೂ ರಾಜ್ಯದ ಜನ ತೋರಿದ ಪ್ರೀತಿಯಿಂದಾಗಿ ಕಣ್ಣೀರು ಬಂದಿದೆ ವಿನಃ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕಲ್ಲ. ನಾನು ಅಂದು ಶಾಸಕರು, ಸಚಿವರಿಗೆ ಸ್ವತಃ ಸಿಹಿ ಊಟ ಹಾಕಿಸಿದ್ದೇನೆ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ