ಆ್ಯಪ್ನಗರ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಎಂದು ಘೋಷಣೆಯಾದ ನಂತರ ಕಾಂಗ್ರೆಸ್‌ ಎರಡು ಹೋಳು: ಈಶ್ವರಪ್ಪ

ಹಿಂದಿನ ಸಿದ್ದರಾಮಯ್ಯ ಮತ್ತು ದೋಸ್ತಿ ಸರಕಾರ ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಹಾಕಿದ್ದ ಪ್ರಕರಣಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಪರಿಶೀಲನೆಯ ನಂತರ ಈ ಪ್ರಕರಣಗಳ ಹಿಂಪಡೆಯುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ

Vijaya Karnataka Web 21 Jan 2020, 9:19 pm
ಶಿರಸಿ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರು ಎನ್ನುವುದು ಘೋಷಣೆಯಾದ ತಕ್ಷಣದಲ್ಲೇ ಕಾಂಗ್ರೆಸ್ ಪಕ್ಷ ಸ್ಫೋಟಗೊಂಡು ಎರಡು ಹೋಳಾಗಲಿದೆ ಎಂದು ಬಿಜೆಪಿ ಧುರೀಣ, ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಭವಿಷ್ಯ ಹೇಳಿದ್ದಾರೆ.
Vijaya Karnataka Web ಕೆಎಸ್‌ ಈಶ್ವರಪ್ಪ
ಕೆಎಸ್‌ ಈಶ್ವರಪ್ಪ


ಉತ್ತರ ಕನ್ನಡದ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಸಚಿವ ಈಶ್ವರಪ್ಪ ಮಾತನಾಡಿದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಕ್ಕೆ ಕನಸು ಕಾಣುತ್ತಿದ್ದಾರೆ. ಆದರೆ ಅವರು ಮತ್ತೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವೇ ಇಲ್ಲ. ಈಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೆಸರು ಘೋಷಣೆ ಆದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹೋಳಾಗುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣರಾಗಲಿದ್ದಾರೆ ಎಂದರು.

ಹಿಂದಿನ ಸರಕಾರ ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಹಾಕಿದ್ದ ಪ್ರಕರಣಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಪರಿಶೀಲನೆಯ ನಂತರ ಈ ಪ್ರಕರಣಗಳ ಹಿಂಪಡೆಯುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎಸ್ ಡಿಪಿಐ ಬಗ್ಗೆ ಮಾಜಿ ಸಚಿವ ಜಮೀರ್ ಅಹಮ್ಮದ್ ಸ್ವತಃ ಭಯ ಹೊಂದಿದ್ದಾರೆ ಅದಕ್ಕಾಗಿಯೇ ಅವರು ಆರ್‌ಎಸ್‌ಎಸ್‌ ಅನ್ನು ನಿಷೇಧ ಮಾಡಬೇಕೆಂಬ ಹೇಳಿಕೆ ನೀಡುತ್ತಿದ್ದಾರೆ ಎಂದು ಈಶ್ವರಪ್ಪ ತಿರುಗೇಟು ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ