ಆ್ಯಪ್ನಗರ

ಅರಣ್ಯ ಭೂಮಿಗೆ ದೇಶಪಾಂಡೆ ಆಗ್ರಹ

ಶಿರಸಿ : ಹುಬ್ಬಳ್ಳಿ-ಅಂಕೋಲಾ ಹೊಸ ಬ್ರಾಡ್‌ ಗೇಜ್‌ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಉಪಯೋಗಿಸಲು ಅನುಮತಿ ನೀಡುವಂತೆ ಮಾಜಿ ಸಚಿವ ಆರ್‌. ವಿ. ದೇಶಪಾಂಡೆ ಆಗ್ರಹಿಸಿದ್ದಾರೆ.

Vijaya Karnataka 7 Jun 2020, 5:00 am
ಶಿರಸಿ : ಹುಬ್ಬಳ್ಳಿ-ಅಂಕೋಲಾ ಹೊಸ ಬ್ರಾಡ್‌ ಗೇಜ್‌ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಉಪಯೋಗಿಸಲು ಅನುಮತಿ ನೀಡುವಂತೆ ಮಾಜಿ ಸಚಿವ ಆರ್‌. ವಿ. ದೇಶಪಾಂಡೆ ಆಗ್ರಹಿಸಿದ್ದಾರೆ.
Vijaya Karnataka Web deshpande demand for forest land
ಅರಣ್ಯ ಭೂಮಿಗೆ ದೇಶಪಾಂಡೆ ಆಗ್ರಹ


ಈ ಕುರಿತು ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವ ಪ್ರಕಾಶ ಜಾವಡೇಕರ್‌ ಅವರಿಗೆ ದೇಶಪಾಂಡೆ ಪತ್ರ ಬರೆದಿದ್ದಾರೆ. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕೆ ಮಾಜಿ ಪ್ರಧಾನಿ ದಿ. ಅಟಲ್‌ ಬಿಹಾರಿ ವಾಜಪೇಯಿ ಅವರು ಅಡಿಗಲ್ಲುಹಾಕಿದ್ದು ಹುಬ್ಬಳ್ಳಿಯಿಂದ ಕಲಘಟಗಿವರೆಗಿನ ಟ್ರ್ಯಾಕನ ಒಂದು ಭಾಗ ಪೂರ್ಣಗೊಂಡಿದೆ. ಮುಂದಿನ ಭಾಗದ ಕಾಮಗಾರಿಯು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿಬರುವುದರಿಂದ ಕಾರವಾರ, ಯಲ್ಲಾಪುರ ಮತ್ತು ಧಾರವಾಡ ವಿಭಾಗದ ಸುಮಾರು 595.64 ಹೆಕ್ಟರ್‌ ನಷ್ಟು ಅರಣ್ಯ ಭೂಮಿ ಉಪಯೋಗಿಸಬೇಕಾಗುತ್ತದೆ.

ಈಗಾಗಲೇ ರಾಜ್ಯ ವನ್ಯಜೀವಿ ಮಂಡಳಿಯಲ್ಲಿರೈಲು ಮಾರ್ಗ ನಿರ್ಮಾಣಕ್ಕೆ ಅರಣ್ಯ ಪ್ರದೇಶ ಬಳಕೆಗೆ ಅನುಮತಿ ನೀಡಲಾಗಿದ್ದು, ಪ್ರಸ್ತಾವನೆಯನ್ನು ಕೇಂದ್ರ ವನ್ಯಜೀವಿ ಮಂಡಳಿಗೆ ಅನುಮತಿಗಾಗಿ ಕಳುಹಿಸಲಾಗಿದೆ. ಹೀಗಾಗಿ ಕೂಡಲೇ ಅನುಮತಿ ನೀಡಬೇಕೆಂದು ದೇಶಪಾಂಡೆ ಒತ್ತಾಯಿಸಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಸುರೇಶ ಅಂಗಡಿ, ಸದಾನಂದ ಗೌಡ ಮತ್ತು ಪ್ರಹ್ಲಾದ ಜೋಶಿಯವರನ್ನು ಕೂಡ ಈ ಬಗ್ಗೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ಒತ್ತಡ ಹೇರುವಂತೆ ಅವರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ