ಆ್ಯಪ್ನಗರ

ಮೀನುಗಾರರ ಪತ್ತೆಗೆ ನೆರವು ಕೋರಿ ಕೇಂದ್ರಕ್ಕೆ ದೇಶಪಾಂಡೆ ಪತ್ರ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ 'ಸುವರ್ಣ ತ್ರಿಭುಜ' ಬೋಟು ಸಮೇತ ಕಾಣೆಯಾಗಿರುವ 8 ಮಂದಿ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಪತ್ರ ಬರೆದಿದ್ದಾರೆ.

Vijaya Karnataka 11 Jan 2019, 5:00 am
ಕಾರವಾರ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ 'ಸುವರ್ಣ ತ್ರಿಭುಜ' ಬೋಟು ಸಮೇತ ಕಾಣೆಯಾಗಿರುವ 8 ಮಂದಿ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಪತ್ರ ಬರೆದಿದ್ದಾರೆ.
Vijaya Karnataka Web deshpande letter to the center seeking help for fishermen detection
ಮೀನುಗಾರರ ಪತ್ತೆಗೆ ನೆರವು ಕೋರಿ ಕೇಂದ್ರಕ್ಕೆ ದೇಶಪಾಂಡೆ ಪತ್ರ

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ''ಕಳೆದ ತಿಂಗಳು ಡಿ.13 ರಂದು 'ಸುವರ್ಣ ತ್ರಿಭುಜ' ಎನ್ನುವ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ 8 ಮೀನುಗಾರರು ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆ ಹಚ್ಚಲು ಸ್ಥಳೀಯ ಕರಾವಳಿ ರಕ್ಷ ಣಾ ಪಡೆ ಮತ್ತು ನೌಕಾದಳಗಳಿಗೆ ಅಗತ್ಯ ಮಾಹಿತಿ ನೀಡಲಾಗಿದೆ. ಈ ಎಂಟು ಮೀನುಗಾರರನ್ನು ಹುಡುಕಲು ರಾಜ್ಯ ಸರಕಾರ ಕೂಡ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ. ಈಗ ಗೃಹ ಸಚಿವರು ಮಧ್ಯಪ್ರವೇಶಿಸಿ, ಇಂತಹ ಕಾರ್ಯಾಚರಣೆಗೆ ಅಗತ್ಯವಿರುವ ವೈಮಾನಿಕ ನೆರವು ನೀಡುವಂತೆ ಅಥವಾ ಇನ್ನಿತರೆ ಬಗೆಯ ಸೂಕ್ತ ನೆರವು ಒದಗಿಸುವಂತೆ ಸಂಬಂಧಿಸಿದವರಿಗೆ ಸೂಚನೆಗಳನ್ನು ನೀಡಬೇಕು'' ಎಂದು ಮನವಿ ಮಾಡಿಕೊಂಡಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಇರಾನ್‌ನಲ್ಲಿ ಆಕಸ್ಮಿಕವಾಗಿ ಸಿಲುಕಿಕೊಂಡಿದ್ದ ಭಟ್ಕಳದ 18 ಮೀನುಗಾರರು ಸುರಕ್ಷಿತವಾಗಿ ವಾಪಸ್‌ ಬರಲು ನೆರವು ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಇದೇ ಸಂದರ್ಭದಲ್ಲಿ ಸಚಿವ ದೇಶಪಾಂಡೆ ಧನ್ಯವಾದಗಳನ್ನು ಸಮರ್ಪಿಸಿ, ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ