ಆ್ಯಪ್ನಗರ

ಬಡ ಮಕ್ಕಳಿಗೂ ಶೈಕ್ಷಣಿಕ ಅವಕಾಶ

ಹಳಿಯಾಳ : ಶಿಕ್ಷ ಣವನ್ನು ಮನೆ ಬಾಗಿಲಿಗೆ ತಲುಪುವಂತೆ ಮಾಡಲಾಗಿದ್ದು ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಬಡ ಮಕ್ಕಳು ಸಹ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಕನ್ನಡ ಭಾಷೆಯ ಅಭಿಮಾನದೊಂದಿಗೆ ಇನ್ನಿತರ ಭಾಷೆಗಳನ್ನು ಕಲಿಯಲು ಆದ್ಯತೆ ನೀಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

Vijaya Karnataka 23 Jun 2019, 5:00 am
ಹಳಿಯಾಳ : ಶಿಕ್ಷ ಣವನ್ನು ಮನೆ ಬಾಗಿಲಿಗೆ ತಲುಪುವಂತೆ ಮಾಡಲಾಗಿದ್ದು ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಬಡ ಮಕ್ಕಳು ಸಹ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಕನ್ನಡ ಭಾಷೆಯ ಅಭಿಮಾನದೊಂದಿಗೆ ಇನ್ನಿತರ ಭಾಷೆಗಳನ್ನು ಕಲಿಯಲು ಆದ್ಯತೆ ನೀಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.
Vijaya Karnataka Web educational opportunity for poor children
ಬಡ ಮಕ್ಕಳಿಗೂ ಶೈಕ್ಷಣಿಕ ಅವಕಾಶ


ಶನಿವಾರ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಜಿ.ಪಂ., ಸಾರ್ವಜನಿಕ ಶಿಕ್ಷ ಣ ಇಲಾಖೆ, ಪದವಿ ಪೂರ್ವ ಶಿಕ್ಷ ಣ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಉದ್ಘಾಟನೆ, ಎಲ್‌ಕೆಜಿ ವಿಭಾಗ, 1ನೇ ತರಗತಿಯ ಆಂಗ್ಲ ಮಾಧ್ಯಮ ಶಾಲೆ, ಹೊಸ ಕಟ್ಟಡಕ್ಕೆ ಅಡಿಗಲ್ಲು, ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಎಸಿಸಿ ಕಂಪನಿಯಿಂದ ನಿರ್ಮಿತ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ ಮತ್ತು ವನಮಹೋತ್ಸವ ಕಾರ‍್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ವಿಶ್ವ ಮಾರುಕಟ್ಟೆಯಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ಹೀಗಾಗಿ ಭಾಷಾ ಪ್ರಾವೀಣ್ಯತೆ ಹೊಂದಬೇಕು. ಕನ್ನಡ ಭಾಷೆಯೊಂದಿಗೆ ಆದಷ್ಟು ಹೆಚ್ಚು ಭಾಷೆಗಳನ್ನು ಕಲಿಯಬೇಕು. ಭಾಷಾ ತಾರತಮ್ಯ ಹಾಗೂ ವಿರೋಧ ಸರಿಯಲ್ಲ. ಜೊತೆಗೆ ಎಲ್ಲರಿಗೂ ಶಿಕ್ಷ ಣ ದೊರೆಯಬೇಕು ಎಂದರು.

ಶಿಕ್ಷ ಣ, ಆರೋಗ್ಯ ಮತ್ತು ಮೂಲ ಸೌಕರ‍್ಯಗಳೊಂದಿಗೆ ಸಾಮಾಜಿಕ ನ್ಯಾಯಕ್ಕಾಗಿ ಸರಕಾರ ಬಜೆಟ್‌ದಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟು, ಆ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದೆ. ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷ ಣವು ಮಹತ್ವ ಪಡೆದಿದ್ದು, ಶಿಕ್ಷ ಕರು ಹಾಗೂ ಪಾಲಕರ ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ 200 ಪಬ್ಲಿಕ್‌ ಸ್ಕೂಲ್‌ ಹಾಗೂ 1000 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು ಇದರ ಉಪಯೋಗವನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಡೆಯಬೇಕಾಗಿದೆ ಎಂದರು.

ಮುಂದಿನ ಒಂದು ವಾರದ ಅವಧಿಯೊಳಗೆ ಜಿಲ್ಲೆಯಲ್ಲಿ ಶಿಕ್ಷ ಕರ ಕೊರತೆ ನಿವಾರಣೆಯಾಗಲಿದೆ. ಉತ್ತಮ ಹಾಗೂ ಗುಣಮಟ್ಟದ ಶಿಕ್ಷ ಣಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದ್ದು, ಮಕ್ಕಳಿಗೆ ನೈತಿಕ ಪಾಠದೊಂದಿಗೆ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಲು ಮುಂದಾಗುವಂತೆ ಮನವಿ ಮಾಡಿದರು.

ಜಿ.ಪಂ. ಉಪಾಧ್ಯಕ್ಷ ಸಂತೋಷ ರೇಣಕೆ, ಸದಸ್ಯರಾದ ಕೃಷ್ಣಾ ಪಾಟೀಲ್‌, ಲಕ್ಷ್ಮೀ ಕೊರ್ವೆಕರ, ಮಹೇಶ್ರೀ ಮಿಶ್ಯಾಳೆ, ತಾ.ಪಂ. ಅಧ್ಯಕ್ಷೆ ರೀಟಾ ಸಿದ್ದಿ, ಮುರ್ಕವಾಡ ಗ್ರಾ.ಪಂ. ಅಧ್ಯಕ್ಷ ಮಾರುತಿ ಕಮ್ಮಾರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುಭಾಷ ಕೊರ್ವೆಕರ, ತಹಸೀಲ್ದಾರ್‌ ವಿದ್ಯಾಧರ ಗುಳಗುಳಿ, ತಾ.ಪಂ. ಇಒ ರಮೇಶ ಕುರಿಯವರ, ಡಿಡಿಪಿಐ ದಿವಾಕರ ಶೆಟ್ಟಿ, ಪ್ರಮುಖರಾದ ವೈ.ಪಿ. ಕೊರ್ವೆಕರ, ಪೀಶಪ್ಪಾ ಶಿಂಧೆ, ಶ್ರೀಪಾದ ಪಾಟಿಲ, ಪ್ರಾಶುಂಪಾಲ ಪ್ರಮೋದ ನಾಯಕ ಮತ್ತೀತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ