ಆ್ಯಪ್ನಗರ

ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಹಾವೇರಿ: ಜಿಲ್ಲೆಯಲ್ಲಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಐದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹಾಗೂ ಒಂದು ನವೋದಯ ಮಾದರಿ ವಸತಿ ಶಾಲೆಗೆ 2020-21 ನೇ ಸಾಲಿನಲ್ಲಿ6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 20 ರವರೆಗೆ ಅವಧಿ ವಿಸ್ತರಿಸಲಾಗಿದೆ.

Vijaya Karnataka 9 May 2020, 5:00 am
ಹಾವೇರಿ: ಜಿಲ್ಲೆಯಲ್ಲಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಐದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹಾಗೂ ಒಂದು ನವೋದಯ ಮಾದರಿ ವಸತಿ ಶಾಲೆಗೆ 2020-21 ನೇ ಸಾಲಿನಲ್ಲಿ6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 20 ರವರೆಗೆ ಅವಧಿ ವಿಸ್ತರಿಸಲಾಗಿದೆ.
Vijaya Karnataka Web extension of period for application submission
ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ


ಹಾವೇರಿ ತಾಲೂಕಿನ ಕರ್ಜಗಿ, ಭೂವೀರಾಪುರ, ಬ್ಯಾಡಗಿ, ಹಾನಗಲ್‌ ತಾಲೂಕು ಅಕ್ಕಿಆಲೂರು ಹಾಗೂ ರಾಣೇಬೆನ್ನೂರನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹಾಗೂ ಹಾವೇರಿ ನಗರದಲ್ಲಿರುವ ನವೋದಯ ಮಾದರಿ ವಸತಿ ಶಾಲೆಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಲ್ಪಸಂಖ್ಯಾತರ ವರ್ಗಗಳಿಗೆ ಶೇ.75 ಹಾಗೂ ಇತರೇ ಹಿಂದುಳಿದ ವರ್ಗಗಳಿಗೆ ಶೇ.25 ರಷ್ಟು ಮೀಸಲಾತಿ ಇರುತ್ತದೆ. ಈ ಶಾಲೆಗಳಲ್ಲಿಆಂಗ್ಲಮಾಧ್ಯಮದಲ್ಲಿಬೋಧಿಸಲಾಗುವುದು. ವಿದ್ಯಾರ್ಥಿಯು ಸರಕಾರದ ಅಥವಾ ಅಂಗೀಕೃತ ಶಾಲೆಗಳಲ್ಲಿ5 ನೇ ತರಗತಿಯಲ್ಲಿಉತ್ತೀರ್ಣರಾಗಿರಬೇಕು ಹಾಗೂ ಮುಸ್ಲಿಂ, ಕ್ರಿಶ್ಚಿಯನ್‌, ಜೈನ್‌, ಸಿಖ್‌, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ.ದೊಳಗಿರಬೇಕು. ಆಸಕ್ತ ವಿದ್ಯಾರ್ಥಿಗಳು ಮೇ 20 ರ ಒಳಗೆ ಅರ್ಜಿ ಸಲ್ಲಿಸಬೇಕು, ಪ್ರವೇಶ ಪರೀಕ್ಷೆ ದಿನಾಂಕ ನಂತರ ಪ್ರಕಟಿಸುವುದಾಗಿ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಖ್ಯೆ 08375-234505ನ್ನು ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ