ಆ್ಯಪ್ನಗರ

ಸಾವಯವ ಕೃಷಿಗೆ ಉತ್ತೇಜನಕ್ಕೆ ಸೌಲಭ್ಯ

ಕಾರವಾರ : ರೈತರಿಗಾಗಿ ಪ್ರಸಕ್ತ ಸಾಲಿನಲ್ಲಿಸಾವಯವ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

Vijaya Karnataka 5 Sep 2019, 5:00 am
ಕಾರವಾರ : ರೈತರಿಗಾಗಿ ಪ್ರಸಕ್ತ ಸಾಲಿನಲ್ಲಿಸಾವಯವ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
Vijaya Karnataka Web facilitation for promotion of organic farming
ಸಾವಯವ ಕೃಷಿಗೆ ಉತ್ತೇಜನಕ್ಕೆ ಸೌಲಭ್ಯ


ಸಾವಯವ ರೈತರು, ನವೋದ್ಯಮಿಗಳು, ರೈತ ಸಂಘಗಳು, ನೋಂದಾಯಿತ ಸ್ವ ಸಹಾಯ ಗುಂಪುಗಳು, ರೈತ ಉತ್ಪಾದಕರ ಸಂಸ್ಥೆಗಳು, ಖಾಸಗಿ ಉದ್ದಿಮೆದಾರರು, ಸಾರ್ವಜನಿಕ ವಲಯ ಘಟಕಗಳು ಮತ್ತು ಆಹಾರ ಘಟಕಗಳ ಸ್ಥಾಪನೆ, ವಿಸ್ತರಣೆ, ಆಧುನೀಕರಣಕ್ಕೆ ಸಂಬಂಧಿಸಿದಂತೆ ಸಾವಯವ ಉದ್ದಿಮೆಯಲ್ಲಿಕಾರ್ಯನಿರತರಾಗಿರುವವರು ಯೋಜನೆಗೆ ಅರ್ಹರಾಗಿದ್ದು, ಸಾವಯವ ಪ್ರಮಾಣ ದಾಖಲಾತಿ ಹೊಂದಿರುವುದು ಅವಶ್ಯಕವಾಗಿರುತ್ತದೆ.

ಸಾವಯವ ಮತ್ತು ನೈಸರ್ಗಿಕ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್‌ ಮತ್ತು ಬ್ರಾಡಿಂಗ್‌ ಘಟಕಗಳಿಗೆ ಪ್ರಸ್ತಾವನೆಯ ಒಟ್ಟು ವೆಚ್ಚದ ಮೇಲೆ ಶೇ.50 ಸಹಾಯಧನ (ಗರಿಷ್ಠ 10 ರೂ.ನಂತೆ ಪ್ರತಿ ಘಟಕಕ್ಕೆ) ಇರುತ್ತದೆ.

ಪ್ರಸ್ತಾವನೆಯ ಒಟ್ಟು ಮೊತ್ತವು 5 ಲಕ್ಷ ರೂ.ಗಿಂತ ಕಡಿಮೆ ಇರುವ ಅರ್ಜಿದಾರರಿಗೆ ಘಟಕ ಸ್ಥಾಪನೆ/ಉನ್ನತೀಕರಣ/ಆಧುನೀಕರಣ ಉದ್ದೇಶಕ್ಕಾಗಿ ಸಹಾಯಧನವನ್ನು ಎರಡು ಕಂತುಗಳಲ್ಲಿಅರ್ಜಿದಾರರ ಬ್ಯಾಂಕ್‌ ಖಾತೆಗೆ ನೇರ ಜಮೆ ಮಾಡಲಾಗುವುದು. 5 ಲಕ್ಷ ರೂ.ಗಿಂತ ಹೆಚ್ಚಾಗಿದ್ದರೆ ಘಟಕ ಸ್ಥಾಪನೆಗೆ ಮಂಜೂರಾಗುವ ನೆರವನ್ನು ಬ್ಯಾಂಕ್‌ ಸಾಲ ಆಧಾರಿತ ಸಹಾಯಧನವಾಗಿ ಸಂಬಂಧಿಸಿದ ರಾಷ್ಟ್ರೀಕೃತ/ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಮುಖಾಂತರ ಎರಡು ಕಂತುಗಳಲ್ಲಿಬಿಡುಗಡೆ ಮಾಡಲಾಗುವುದು.

ಕಾರ್ಯಕ್ರಮವು ಪ್ರಸ್ತಾವನೆ ಆಧಾರಿತವಾಗಿದ್ದು, ಜಿಲ್ಲಾಜಂಟಿ ಕೃಷಿ ನಿರ್ದೇಶಕರ ಮೂಲಕ ಅನುಷ್ಠಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಚೇರಿ/ ಜಂಟಿ ಕೃಷಿ ನಿರ್ದೇಶಕರ ಕಚೇರಿ/ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಜಿಲ್ಲಾಕೃಷಿ ಇಲಾಖೆ ಕೃಷಿ ನಿರ್ದೇಶಕರು ಕೋರಿರುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ