ಆ್ಯಪ್ನಗರ

ಕ್ರಿಯಾತ್ಮಕ ಚಟುವಟಿಕೆ ತರಬೇತಿ ಸಮಾರೋಪ

ಯಲ್ಲಾಪುರ : ಜಿಲ್ಲಾ ಬಾಲ ಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಯಲ್ಲಾಪುರ ಹಾಗೂ ಅರುಣೋದಯ ಸಂಸ್ಥೆ (ರಿ)ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ 9ರಿಂದ 16 ವರ್ಷದ ಮಕ್ಕಳಿಗಾಗಿ ಯಲ್ಲಾಪುರ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ನಡೆಸಿದ ವಾರಾಂತ್ಯ ಕ್ರಿಯಾತ್ಮಕ ಚಟುವಟಿಕೆ ತರಬೇತಿಯ ಸಮಾರೋಪ ಸಮಾರಂಭವನ್ನು ನೆರವೇರಿಸಲಾಯಿತು.

Vijaya Karnataka 3 Jun 2019, 5:00 am
ಯಲ್ಲಾಪುರ : ಜಿಲ್ಲಾ ಬಾಲ ಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಯಲ್ಲಾಪುರ ಹಾಗೂ ಅರುಣೋದಯ ಸಂಸ್ಥೆ (ರಿ)ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ 9ರಿಂದ 16 ವರ್ಷದ ಮಕ್ಕಳಿಗಾಗಿ ಯಲ್ಲಾಪುರ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ನಡೆಸಿದ ವಾರಾಂತ್ಯ ಕ್ರಿಯಾತ್ಮಕ ಚಟುವಟಿಕೆ ತರಬೇತಿಯ ಸಮಾರೋಪ ಸಮಾರಂಭವನ್ನು ನೆರವೇರಿಸಲಾಯಿತು.
Vijaya Karnataka Web KWR-1 YLP 4

ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಯಲ್ಲಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮೀ ಭಟ್ಟ, ಬಡವ ಬಲ್ಲಿದರೆಂಬ ತಾರತಮ್ಯವಿಲ್ಲದಂತೆ ಪ್ರತಿಯೊಬ್ಬ ಮಗುವಿನಲ್ಲಿಯೂ ಯಾವುದೋ ಒಂದು ಪ್ರತಿಭೆ ಅಡಗಿರುತ್ತಿದೆ. ಆಸಕ್ತಿಯಿರುವ ಕ್ಷೇತ್ರದಲ್ಲಿ ತರಬೇತಿ ಪಡೆದು ಕೌಶಲವನ್ನು ಹೊಂದುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದಿಂದ ಜಾರಿ ಮಾಡಿರುವ ವಾರಾಂತ್ಯ ಕ್ರಿಯಾತ್ಮಕ ಚಟುವಟಿಕೆ ಕಾರ್ಯಕ್ರಮವು ಹೆಚ್ಚು ಪರಿಣಾಮಕಾರಿಯಾಗಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಆತ್ಮವಿಶ್ವಾಸದಿಂದ ಕಾರ್ಯೋನ್ಮುಖರಾಗುವಂತೆ ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಯಲ್ಲಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ವೀರವ್ವ ಎಂ. ಪೂಜಾರ, ರುಕ್ಮಿಣಿ ರಾಮದುರ್ಗ, ಪ್ರಮೋದಾ ಚಂದ್ರಶೇಖರ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಸುಲೋಚನ ಮಧ್ಯಸ್ಥ ಉಪಸ್ಥಿತರಿದ್ದರು.

ಅರುಣೋದಯ ಸಂಸ್ಥೆಯ ಕಾರ್ಯ ನಿರ್ವಾಹಕ ರಾಜು ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸವಿತಾ ಮುಂಡೂರ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ