ಆ್ಯಪ್ನಗರ

ರಾಜಕೀಯ ಜೀವನ ನಿವೃತ್ತಿಯ ಸುಳಿವು ನೀಡಿದ ಸಂಸದ ಅನಂತ್‌ ಕುಮಾರ್ ಹೆಗಡೆ!

‘ಗ್ರಾಮೀಣ ಭಾಗಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಅನುದಾನ ನೀಡಲಾಗಿದೆ. ಭವಿಷ್ಯದಲ್ಲಿ ಜನರಿಗೆ ಅವಶ್ಯವಿರುವ ಪ್ರದೇಶಗಳಲ್ಲಿ ಅನುದಾನ ನೀಡಲಾಗುವುದು. ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ಗರಿಷ್ಠ ಅನುದಾನ ಬಿಡುಗಡೆಗೊಳಿಸಿದೆ. ಇದರ ಸದ್ಬಳಕೆಯಾದರೆ ಗ್ರಾಮೀಣ ರಸ್ತೆಗಳಿಗೂ ಹೊಸ ಹೊಳಪು ಬರಲಿದೆ’ ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು.

Vijaya Karnataka 21 Jan 2022, 7:39 am
ಕುಮಟಾ (ಉತ್ತರ ಕನ್ನಡ): ಯಾವುದೇ ಅಡೆತಡೆಗಳಿಲ್ಲದೆ ಜಿಲ್ಲೆಯಲ್ಲಿ ಮಂಜೂರಾದ ಯೋಜನೆಗಳ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಯಲಿದೆ. ಇನ್ನು ಎರಡು ವರ್ಷ ನನಗೆ ಅಧಿಕಾರವಿದೆ. ಭವಿಷ್ಯದಲ್ಲಿ ರಾಜಕಾರಣದಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ಹೇಳುವ ಮೂಲಕ ಸಂಸದ ಅನಂತ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ.
Vijaya Karnataka Web Anant Kumar Hegde


ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಲ್ಲಿ ಕುಮಟಾ ತಾಲೂಕಿನ ಕಂದವಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಕಂದವಳ್ಳಿ, ಮರಾಕಲ್‌, ದೀವಳ್ಳಿ ಗ್ರಾಮೀಣ 5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ‘ಗ್ರಾಮೀಣ ಭಾಗಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಅನುದಾನ ನೀಡಲಾಗಿದೆ. ಭವಿಷ್ಯದಲ್ಲಿ ಜನರಿಗೆ ಅವಶ್ಯವಿರುವ ಪ್ರದೇಶಗಳಲ್ಲಿ ಅನುದಾನ ನೀಡಲಾಗುವುದು. ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ಗರಿಷ್ಠ ಅನುದಾನ ಬಿಡುಗಡೆಗೊಳಿಸಿದೆ. ಇದರ ಸದ್ಬಳಕೆಯಾದರೆ ಗ್ರಾಮೀಣ ರಸ್ತೆಗಳಿಗೂ ಹೊಸ ಹೊಳಪು ಬರಲಿದೆ’ ಎಂದರು.
ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರಗ ಜ್ಞಾನೇಂದ್ರ
‘ಕೇವಲ ರಸ್ತೆಗಳು ಅಭಿವೃದ್ಧಿಗೊಂಡರೆ ಸಾಲದು. ಬದಲಾಗಿ ಉದ್ಯೋಗ ಸೃಷ್ಟಿಯಾಗಬೇಕು. ಈ ನಿಟ್ಟಿನಲ್ಲಿ ಕರಾವಳಿ ಭಾಗದಲ್ಲಿ ಶೀಘ್ರವೇ 3 ಬಂದರು ಬರಲಿವೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಜತೆಗೆ ಉದ್ಯೋಗ ಪ್ರಮಾಣವೂ ಹೆಚ್ಚಾಗಲಿದೆ’ ಎಂದು ಹೇಳಿದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ಗ್ರಾಮೀಣ ಭಾಗಗಳಲ್ಲಿ ರಸ್ತೆಗಳ ಅಗತ್ಯವಿರುವ ಕಡೆ ಅಧಿಕಾರಿಗಳ ತಂಡ ಕಳುಹಿಸಿ ಸರ್ವೆ ಕಾರ್ಯ ನಡೆಸಲಾಗುವುದು. ಸದ್ಯದ ರಸ್ತೆ ಕಾಮಗಾರಿಗಳಿಗೆ ಸಂಸದ ಅನಂತ ಕುಮಾರ್ ಹೆಗಡೆ ಅನುದಾನ ನೀಡಿದ್ದಾರೆ. ಅವರು ಇನ್ನು ಮುಂದೆಯೂ ಅಭಿವೃದ್ಧಿ ಕಾರ್ಯ ಮುಂದುವರಿಸಲಿದ್ದಾರೆ’ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ತಾಲೂಕಾಧ್ಯಕ್ಷ ಹೇಮಂತ ಗಾಂವಕರ್‌, ನಿಕಟಪೂರ್ವ ಜಿಪಂ ಸದಸ್ಯರಾದ ಗಜಾನನ ಪೈ, ಕಲ್ಲಬ್ಬೆ ಗ್ರಾಪಂ ಅಧ್ಯಕ್ಷ ಗಿರಿಯಾ ಗೌಡ, ಮುಖಂಡರಾದ ಎಂ.ಜಿ.ಭಟ್ಟ, ಅಳಕೋಡ ಗ್ರಾಪಂ ಅಧ್ಯಕ್ಷೆ ಕೇಸರಿ ಜೈನ್‌, ಸೊಪ್ಪಿನ ಹೊಸಳ್ಳಿ ಅಧ್ಯಕ್ಷೆ ಕಲ್ಪನಾ ಮುಕ್ರಿ, ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ