ಆ್ಯಪ್ನಗರ

ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹಧನ

ಮುಂಡಗೋಡ: ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗಿ ಹೊರ ಹೊಮ್ಮುತ್ತಿದ್ದು, ಅತಿ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿಯೂ ಸಹ ಇವುಗಳನ್ನು ಬೆಳೆಯಬಹುದಾಗಿದೆ. ಹಾಗೆಯೇ ಶುಷ್ಕ, ಒಣ ಪರಿಸ್ಥಿತಿಗಳಲ್ಲಿ ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿಯೂ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijaya Karnataka 30 Jun 2019, 5:00 am
ಮುಂಡಗೋಡ: ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗಿ ಹೊರ ಹೊಮ್ಮುತ್ತಿದ್ದು, ಅತಿ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿಯೂ ಸಹ ಇವುಗಳನ್ನು ಬೆಳೆಯಬಹುದಾಗಿದೆ. ಹಾಗೆಯೇ ಶುಷ್ಕ, ಒಣ ಪರಿಸ್ಥಿತಿಗಳಲ್ಲಿ ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿಯೂ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web incentive to grow siridhanya crop
ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹಧನ

ರಾಜ್ಯ ಸರಕಾರವು ಸಿರಿಧಾನ್ಯ ಬೆಳೆಗಳನ್ನು ಬೆಳೆಯಲು ಉತ್ತೇಜಿಸುತ್ತಿದ್ದು, ಸಿರಸಿಧಾನ್ಯ ಬೆಳೆಯುವ ರೈತರಿಗೆ ಹೆಕ್ಟೇರ್‌ಗೆ 10ಸಾವಿರ ರೂ, 2 ಹೆಕ್ಟೇರ್‌ಗೆ ಸಿಮಿತಗೊಳಿಸಿ ಪ್ರೋತ್ಸಾಹಧನ ನೀಡಲು ಉದ್ದೇಶಿಸಿದೆ. ಸಿರಿಧಾನ್ಯಗಳಾದ ಉದ್ದು, ನವಣೆ, ಹಾರಕ, ಕೋರಲೆ, ಬರಗು, ಬೆಳೆ ಬೆಳೆಯುವ ತಾಲೂಕಿನ ರೈತರು ಆ.10 ರೊಳಗೆ ರೈತಸಿರಿ ಯೋಜನೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ತಿಳಿಸಲಾಗಿದೆ.

ಪ್ರೋತ್ಸಾಹಧನವನ್ನು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಮುಂಡಗೋಡ, ಪಾಳಾ ಕಚೇರಿಗೆ ಸಂಪರ್ಕಿಸಬೇಕಾಗಿ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ