ಆ್ಯಪ್ನಗರ

ಕಾರವಾರದಲ್ಲಿ ಸೋಂಕಿತ ಸಾವು

ಕಾರವಾರ : ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಕಾರವಾರ ಮೆಡಿಕಲ್‌ ಕಾಲೇಜಿನ ಕೋವಿಡ್‌ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.ಶಿರಸಿ ಮೂಲದ ಬಾಳಗಾರಿನ 42 ವರ್ಷದ ಸೋಂಕಿತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿಕೆಲಸ ಮಾಡುತ್ತಿದ್ದರು. ಜು.4 ರಂದು ಬೆಂಗಳೂರಿನಿಂದ ಶಿರಸಿಗೆ

Vijaya Karnataka 7 Jul 2020, 5:00 am
ಕಾರವಾರ : ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಕಾರವಾರ ಮೆಡಿಕಲ್‌ ಕಾಲೇಜಿನ ಕೋವಿಡ್‌ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
Vijaya Karnataka Web infected death in karwar
ಕಾರವಾರದಲ್ಲಿ ಸೋಂಕಿತ ಸಾವು

ಶಿರಸಿ ಮೂಲದ ಬಾಳಗಾರಿನ 42 ವರ್ಷದ ಸೋಂಕಿತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿಕೆಲಸ ಮಾಡುತ್ತಿದ್ದರು. ಜು.4 ರಂದು ಬೆಂಗಳೂರಿನಿಂದ ಶಿರಸಿಗೆ ಬಂದು ಶಿರಸಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರಲ್ಲಿಹೈಪರ್‌ಟೆನ್ಶನ್‌ ಸೇರಿದಂತೆ ವಿವಿಧ ಬಗೆಯ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಜು. 5ರಂದು ಗಂಟಲುದ್ರವದ ಮಾದರಿಯನ್ನು ಪರೀಕ್ಷಿಸಿದ ನಂತರ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿಸೋಮವಾರ ಬೆಳಗ್ಗೆ ಕಾರವಾರದ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ ಅವರು ಮೃತಪಟ್ಟಿದ್ದಾರೆ ಎಂದು ಕಾರವಾರ ಮೆಡಿಕಲ್‌ ಕಾಲೇಜಿನ ಡೀನ್‌ ಡಾ. ಗಜಾನನ ನಾಯಕ ಅವರು ಖಚಿತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ