ಆ್ಯಪ್ನಗರ

ಕೇಶವ ನಾಯ್ಕರಿಗೆ ಗಾನ ಗಂಧರ್ವ ಪ್ರಶಸ್ತಿ ಪ್ರದಾನ

ಸಿದ್ದಾಪುರ : ಪಟ್ಟಣದ ಕೊಂಡ್ಲಿಯ ಯುವ ಗಾಯಕ ಕೇಶವ ಗೋವಿಂದ ನಾಯ್ಕ ಅವರಿಗೆ ಅಖಿಲ ಕರ್ನಾಟಕ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಮತ್ತು ಸರ್ವ ಜಾನಪದ ಕಲಾವಿದರ ಸಂಘದಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗಾನ ಗಂಧರ್ವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Vijaya Karnataka 12 Jun 2019, 5:00 am
ಸಿದ್ದಾಪುರ : ಪಟ್ಟಣದ ಕೊಂಡ್ಲಿಯ ಯುವ ಗಾಯಕ ಕೇಶವ ಗೋವಿಂದ ನಾಯ್ಕ ಅವರಿಗೆ ಅಖಿಲ ಕರ್ನಾಟಕ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಮತ್ತು ಸರ್ವ ಜಾನಪದ ಕಲಾವಿದರ ಸಂಘದಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗಾನ ಗಂಧರ್ವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Vijaya Karnataka Web KWR-10SDPR1-A


ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಿ.ಟಿ.ಲಲಿತಾ ನಾಯಕ, ಚಲನಚಿತ್ರ ನಟರಾದ ಬ್ಯಾಂಕ್‌ ಜನಾರ್ಧನ, ರೇಖಾದಾಸ್‌, ಅಖಿಲ ಕರ್ನಾಟಕ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಮತ್ತು ಸರ್ವ ಜಾನಪದ ಕಲಾವಿದರ ಸಂಘದ ಗೌರವಾಧ್ಯಕ್ಷ ಡಾ.ಸಿದ್ದಣ್ಣ ಬಾಡಗಿ, ರಾಜ್ಯಾಧ್ಯಕ್ಷ ಚಂದ್ರಶೇಖರ ಕುರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಯಪ್ಪ ದಡ್ಡಿಮನಿ, ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ ಸುಗತೆ, ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಹಾಂತೇಶ ಹಟ್ಟಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಅಶೋಕ ಹಳ್ಳಿ ಮುಂತಾದ ಗಣ್ಯರ ಉಪಸ್ಥಿತಿಯಲ್ಲಿ ಗಾನಗಂಧರ್ವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕೇಶವ ನಾಯ್ಕ ಕಳೆದ 13 ವರ್ಷಗಳಿಂದ ಸಾಮಾಜಿಕ ನಾಟಕಗಳಲ್ಲಿ ಹೆಣ್ಣು ಹಾಗೂ ಗಂಡು ಎರಡೂ ಧ್ವನಿಗಳಲ್ಲಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲದೇ ಹಾವೇರಿ, ದಾವಣಗೆರೆ, ಗದಗ ಈ ಮುಂತಾದ ಕಡೆಗಳಲ್ಲೂ 600 ಕ್ಕೂ ಹೆಚ್ಚು ಬಾರಿ ತಮ್ಮ ಹಿನ್ನೆಲೆ ಗಾಯನವನ್ನು ಪ್ರಸ್ತುತಪಡಿಸಿದ್ದಾರೆ. ಆರ್ಕೆಸ್ಟ್ರಾ ಹಾಗೂ ಡ್ರಂ ಸೆಟ್‌ಗಳ ಜೊತೆಯೂ ಹಾಡುವ ಇವರು ಯುಗಳಗೀತೆಗಳನ್ನು ಹಾಡುವಲ್ಲಿ ಗಮನ ಸೆಳೆದಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ