ಆ್ಯಪ್ನಗರ

ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಪುರದಲ್ಲಿ ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಂಪ್ಯೂಟರ್ ಶಿಕ್ಷಕಿಯಾಗಿದ್ದ ಶೋಭಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.

Vijaya Karnataka Web 27 Jun 2018, 3:36 pm
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಪುರದಲ್ಲಿ ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಂಪ್ಯೂಟರ್ ಶಿಕ್ಷಕಿಯಾಗಿದ್ದ ಶೋಭಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.
Vijaya Karnataka Web Capture


ದಿಲ್ಲಿಯಿಂದ ಕೇರಳಕ್ಕೆ ಹೋಗುವ ಮಂಗಳಾ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಶೋಭಾ ಮಾದೇವ ನಾಯ್ಕ (24) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿರಾಲಿಯ ಸೆಂಟ್ ಥಾಮಸ್ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿದ್ದ ಮೃತ ಯುವತಿ ನಿನ್ನೆ ರಾತ್ರಿ 8 ಗಂಟೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪೊಲೀಸರ ತನಿಖೆ ವೇಳೆ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದ್ದು, ಯುವತಿಯ ಶವ ಪತ್ತೆಯಾಗಿದೆ.

ಯುವತಿ ಮೃತಪಟ್ಟಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ