ಆ್ಯಪ್ನಗರ

ಮುಂಡವಾಡ: ಗ್ಯಾಸ್‌ ಸಿಲಿಂಡರ್‌ ಕಿಟ್‌ ವಿತರಣೆ

ಹಳಿಯಾಳ: ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಜನರ ಸೇವೆಗಾಗಿ ಸದಾ ಸಿದ್ದವಾಗಿದ್ದು, ಮುಂದಿನ ದಿನಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ಮಹಿಳೆಯರಿಗಾಗಿ ಜನಸ್ನೇಹಿ ಯೋಜನೆಗಳು ಜಾರಿಗೆ ಬರಲಿವೆ ಎಂದು ಮಾಜಿ ಶಾಸಕ ಸುನೀಲ್‌ ಹೆಗಡೆ ಹೇಳಿದರು.

Vijaya Karnataka 16 Jul 2019, 5:00 am
ಹಳಿಯಾಳ: ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಜನರ ಸೇವೆಗಾಗಿ ಸದಾ ಸಿದ್ದವಾಗಿದ್ದು, ಮುಂದಿನ ದಿನಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ಮಹಿಳೆಯರಿಗಾಗಿ ಜನಸ್ನೇಹಿ ಯೋಜನೆಗಳು ಜಾರಿಗೆ ಬರಲಿವೆ ಎಂದು ಮಾಜಿ ಶಾಸಕ ಸುನೀಲ್‌ ಹೆಗಡೆ ಹೇಳಿದರು.
Vijaya Karnataka Web KWR-15 HLY 2


ತಾಲೂಕಿನ ಮುಂಡವಾಡ ಗ್ರಾಮದಲ್ಲಿ ಬಡವರಿಗೆ ಉಜ್ಜಲ್‌ ಯೋಜನೆಯಡಿ ಉಚಿತವಾಗಿ ಗ್ಯಾಸ ಸಿಲಿಂಡರ್‌ ಕಿಟ್‌ ವಿತರಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರವು ಬಡವರ ಪರವಾಗಿದ್ದು, ಹಲವಾರು ಯೋಜನೆಗಳ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮನ ಗೆದ್ದಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಜನೋಪಯೋಗಿ ಯೋಜನೆಗಳು ಬಡವರ ಮನೆ ಬಾಗಿಲಿಗೆ ತಲುಪಿವೆ ಎಂದರು.

ಕೇಂದ್ರ ಸರಕಾರವು ಬಡವರಿಗೆ ವರದಾನವಾಗಿದ್ದು, ಉಚಿತ ಸಿಲೆಂಡರ್‌ ವಿತರಣೆ, ಜನೌಷಧಿ ಅಂಗಡಿಗಳ ಸ್ಥಾಪನೆ ಸೇರಿದಂತೆ ಇನ್ನಿತರ ಯೋಜನೆಗಳ ಮೂಲಕ ಬಡವರ ಜೀವನ ಮಟ್ಟದಲ್ಲಿ ಸುಧಾರಣೆ ಕಂಡು ಬಂದಿದೆ ಎಂದರು. ಈಗಾಗಲೇ ತಾಲೂಕಿನ ಸುಮಾರು 100ಕ್ಕೂ ಅಧಿಕ ಗ್ರಾಮಗಳ 2000ಕ್ಕೂ ಅಧಿಕ ಕುಟುಂಬಗಳಿಗೆ ಗ್ಯಾಸ್‌ ಮತ್ತು ಒಲೆಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಬಿಜೆಪಿ ಸದಸ್ಯತ್ವ ಅಭಿಯಾನ ಸಂಚಾಲಕ ಅನಿಲ ಮುತ್ನಾಳ್‌, ಪ್ರಮುಖರಾದ ಶ್ರೀಕಾಂತ ಸೋನಾರ, ಸುಭಾಷ ಪರಸನ್ನವರ, ಲೊಕುರಿ ಯಮನಪ್ಪನವರ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ