ಆ್ಯಪ್ನಗರ

ಬೋರ್‌ವೆಲ್‌ ಮಾಲಿಕರ ಜತೆ ಒಪ್ಪಂದ ಮಾಡಿಕೊಳ್ಳುವಲ್ಲಿ ಅಲಕ್ಷ್ಯ

ಕಾರವಾರ : ಕುಡಿಯುವ ನೀರಿನ ಅಭಾವವಿರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ ಅದರ ಮಾಲಿಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜು ಮಾಡದ ಜಿಲ್ಲೆಯ 10 ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಅವರು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

Vijaya Karnataka 31 May 2019, 5:00 am
ಕಾರವಾರ : ಕುಡಿಯುವ ನೀರಿನ ಅಭಾವವಿರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ ಅದರ ಮಾಲಿಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜು ಮಾಡದ ಜಿಲ್ಲೆಯ 10 ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಅವರು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.
Vijaya Karnataka Web neglecting to negotiate with the bourgeois owners
ಬೋರ್‌ವೆಲ್‌ ಮಾಲಿಕರ ಜತೆ ಒಪ್ಪಂದ ಮಾಡಿಕೊಳ್ಳುವಲ್ಲಿ ಅಲಕ್ಷ್ಯ

ಐದು ತಿಂಗಳ ಹಿಂದೆಯೇ ಕುಡಿಯುವ ನೀರಿನ ಅಭಾವ ಬರಬಹುದಾದ ಗ್ರಾಮಗಳಲ್ಲಿ ಹೆಚ್ಚುವರಿ ನೀರು ಇರುವ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ ಆ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸೂಚಿಸಿದ್ದರೂ, ಈವರೆಗೆ ತಹಸೀಲ್ದಾರ್‌ರವರು ಒಪ್ಪಂದ ಮಾಡಿಕೊಳ್ಳದ ಬಗ್ಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಅವರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಆಕ್ಷೇಪಿಸಿ ನೋಟಿಸ್‌ ಜಾರಿಗೊಳಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಧಿಕಾರಿ ಹಳಿಯಾಳ ತಹಸೀಲ್ದಾರ್‌ ಹೊರತುಪಡಿಸಿ 10 ಮಂದಿ ತಹಸೀಲ್ದಾರ್‌ರವರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಹೆಚ್ಚುವರಿ ನೀರು ಇರುವ ಬೋರ್‌ವೆಲ್‌ಗಳನ್ನು ಗುರುತಿಸಿ ಕುಡಿಯುವ ನೀರಿನ ಅಭಾವ ಇರುವ ಗ್ರಾಮಗಳಿಗೆ ಒಪ್ಪಂದ ಮಾಡಿಕೊಂಡು ನೀರು ಕೊಟ್ಟಿರುವುದಿಲ್ಲ. ಇನ್ನು ಮೂರು ದಿನದೊಳಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜು ಮಾಡಿದ ಬಗ್ಗೆ ವರದಿ ಸಲ್ಲಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ