ಆ್ಯಪ್ನಗರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್‌ ಇಲ್ಲ: ಶಿವರಾಮ ಹೆಬ್ಬಾರ

ವಿದೇಶಗಳಿಂದ ಮತ್ತು ಹೊರರಾಜ್ಯಗಳಿಂದ ಬಂದವರಿಂದಾಗಿ ಭಟ್ಕಳದಲ್ಲಿ ಸೋಂಕು ಹೆಚ್ಚಲು ಕಾರಣವಾಗಿದೆ. ಭಟ್ಕಳದಲ್ಲಿ ಈಗನಿಂದಲೇ ಕೋವಿಡ್ ಪರೀಕ್ಷೆಯನ್ನು ಇನ್ನಷ್ಟು ತ್ವರಿತವಾಗಿ ಮಾಡಲು ತೀರ್ಮಾನಿಸಲಾಗಿದೆ.

Vijaya Karnataka Web 13 Jul 2020, 7:29 pm
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಶಿವರಾಮ್‌ ಹೆಬ್ಬಾರ
ಶಿವರಾಮ್‌ ಹೆಬ್ಬಾರ


ಸೋಮವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಯೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ, ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಕಂಡುಬರುತ್ತಿಲ್ಲ, ಮುಖ್ಯಮಂತ್ರಿ ಬಿ.‌ ಎಸ್. ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ನಮ್ಮ ಜಿಲ್ಲೆಯ ಪ್ರಸ್ತುತ ಸ್ಥಿತಿಗತಿಯ ವಿವರಗಳನ್ನು ಅಧಿಕಾರಿಗ‌ಳ ತಂಡ ಮುಖ್ಯಮಂತ್ರಿಗಳ ಜತೆ ವಿವರವಾಗಿ ಹಂಚಿಕೊಂಡಿದ್ದಾರೆ ಎಂದರು.

ಈಗಾಗಲೇ ಭಟ್ಕಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಉಳಿದ ಹಲವು ತಾಲೂಕುಗಳಲ್ಲಿ ಮಧ್ಯಾಹ್ನ 2 ಗಂಟೆ ಬಳಿಕ ಸಾರ್ವಜನಿಕರೇ ಸ್ವಯಂ ಘೋಷಿತ ಬಂದ್ ಜಾರಿಗೆ ತಂದಿದ್ದಾರೆ. ಸ್ವಯಂ ಘೋಷಿತ ಬಂದ್ ನಡೆಸುವುದಕ್ಕೆ ಜಿಲ್ಲಾಡಳಿತ ಬೆಂಬಲ ನೀಡುತ್ತದೆ ಎಂದರು.

ಭಟ್ಕಳದಲ್ಲಿ ಪ್ರತಿದಿನ 2 ಗಂಟೆಯವರೆಗೆ ಈಗಾಗಲೇ ಜಾರಿಗೊಳಿಸಿರುವ ಲಾಕ್‌ಡೌನ್ ಯಥಾಪ್ರಕಾರ ಮುಂದುವರಿಯುತ್ತದೆ ಎಂದು ಸಚಿವರು ತಿಳಿಸಿದರು.

ವಿದೇಶಗಳಿಂದ ಮತ್ತು ಹೊರರಾಜ್ಯಗಳಿಂದ ಬಂದವರಿಂದಾಗಿ ಭಟ್ಕಳದಲ್ಲಿ ಸೋಂಕು ಹೆಚ್ಚಲು ಕಾರಣವಾಗಿದೆ. ಭಟ್ಕಳದಲ್ಲಿ ಕೋವಿಡ್ ಪರೀಕ್ಷೆಯನ್ನು ಇನ್ನಷ್ಟು ತ್ವರಿತವಾಗಿ ಮಾಡಲು ತೀರ್ಮಾನಿಸಲಾಗಿದೆ. ಅನಿವಾರ್ಯ ಸಂದರ್ಭಗಳಲ್ಲಿ ಶಿರಸಿ, ಸಿದ್ದಾಪುರದವರಿಗೆ ಶಿವಮೊಗ್ಗ, ಮುಂಡಗೋಡ, ಹಳಿಯಾಳ‌ ಮುಂತಾದ ಪ್ರದೇಶದ ಜನರಿಗೆ ಹುಬ್ಬಳ್ಳಿಗೆ ತೆರಳಲು ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ ಎಂದು ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.

ಶಾಸಕಿ ರೂಪಾಲಿ ನಾಯ್ಕ, ಡಿಸಿ ಡಾ. ಹರೀಶ್ ಕುಮಾರ ಕೆ., ಸಿಇಒ ಎಂ. ರೋಶನ್, ಎಸ್ ಪಿ ಶಿವಪ್ರಕಾಶ ದೇವರಾಜು, ಕಾರವಾರ ಎಸಿ ಪ್ರಿಯಾಂಗಾ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ