ಆ್ಯಪ್ನಗರ

ಹಾಸ್ಟೆಲ್‌ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

ಕಾರವಾರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಸಾಮಾನ್ಯ ಹಾಗೂ ಮಾದರಿ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2019-20ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1, 2ಎ, 2ಬಿ, 3ಎ, 3ಬಿ ಪ.ಜಾ./ಪ.ಪಂ ಹಾಗೂ ಇತರೇ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 17 Jun 2019, 5:00 am
ಕಾರವಾರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಸಾಮಾನ್ಯ ಹಾಗೂ ಮಾದರಿ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2019-20ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1, 2ಎ, 2ಬಿ, 3ಎ, 3ಬಿ ಪ.ಜಾ./ಪ.ಪಂ ಹಾಗೂ ಇತರೇ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web online application for hostel admission
ಹಾಸ್ಟೆಲ್‌ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ, ಪ್ರವರ್ಗ-1, ಎಸ್‌.ಸಿ., ಎಸ್‌.ಟಿ ದವರಿಗೆ 2.5 ಲಕ್ಷ ರೂ. ಮತ್ತು 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರರಿಗೆ 1 ಲಕ್ಷ ರೂ.ದೊಳಗಿರಬೇಕು.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್‌ ನ್ನು ನೋಡಬಹುದಾಗಿದೆ.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಗೆ ಹಾಗೂ ಗೆ ಇ-ಮೇಲ್‌ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ದೂ.ಸಂ. 08382-226588 ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ